

ದೇವದುರ್ಗ: ತಾಲೂಕು ಏಷ್ಯಾ ಖಂಡದಲ್ಲೇ ಅತ್ಯಂತ ಹಿಂದುಳಿದಿದ್ದು ಅತಿಹೆಚ್ಚು ಕುಗ್ರಾಮಗಳನ್ನು ಹೊಂದಿದೆ. ಇಂಥ ಪ್ರದೇಶದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾವ ಪುರುಷಾರ್ಥಕ್ಕಾಗಿ ಟೋಲ್‌ಗೇಟ್ ನಿರ್ಮಿಸುತ್ತಿದ್ದಾರೆ ಎಂದು ಸಿಐಟಿಯು ತಾಲೂಕು ಕಾರ್ಯದರ್ಶಿ ಗಿರಿಯಪ್ಪ ಪೂಜಾರಿ ಪ್ರಶ್ನಿಸಿದ್ದಾರೆ.
ಲ್‌ಗೇಟ್ ನಿರ್ಮಿಸಲು ನಿರ್ದಿಷ್ಟ ಮಾನದಂಡಗಳಿವೆ. ಆ ನಿಯಮಗಳು ತಾಲೂಕಿಗೆ ಅನ್ವಯಿಸುವುದೇ ಇಲ್ಲ. ಅಭಿವೃದ್ಧಿ ಮರೀಚಿಕೆಯಾಗಿದ್ದು ಬಡತನ, ಹಸಿವು, ಅಪೌಷ್ಟಿಕತೆ ತಾಂಡವವಾಡುತ್ತಿದೆ. ಯುವಕರು, ಜನರು ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೊರಟಿದ್ದಾರೆ. ಬೇರೆ ತಾಲೂಕಿಗೆ ಹೋಲಿಸಿದರೆ ನಮ್ಮಲ್ಲಿ ಹೇಳಿಕೊಳ್ಳುವಷ್ಟು ಅಭಿವೃದ್ಧಿಯಾಗಿಲ್ಲ. ಸಾರಿಗೆ ಸಂಪರ್ಕ ಅಷ್ಟಕಷ್ಟೆ.
ಇಂಥ ಪ್ರದೇಶದಲ್ಲಿ ಕೇವಲ 73ಕಿಮೀ ವ್ಯಾಪ್ತಿಯಲ್ಲಿ ಎರಡು ಟೋಲ್‌ಗೇಟ್ ನಿರ್ಮಾಣ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಟೋಲ್‌ಗೇಟ್ ರದ್ದುಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.