More

    ಹಿಂಸಾಚಾರ ಸಂತ್ರಸ್ಥರಿಗೆ ನಾಳೆ ಪರಿಹಾರ ವಿತರಣೆ, ಇಂದು ದೆಹಲಿ ಶಾಂತವಾಗಿದೆ; ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​

    ನವದೆಹಲಿ: ದೆಹಲಿ ಇಂದು ಶಾಂತವಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹಿಂಸಾಚಾರದ ಯಾವ ಸುದ್ದಿಯೂ ಬಂದಿಲ್ಲ ಎಂದರು.

    ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಲಾಗಿದೆ. ಇಂದು ದೆಹಲಿಯ ಎಲ್ಲ ಪ್ರದೇಶಗಳಲ್ಲಿ ಯಾವುದೇ ಆಹಿತಕರ ಘಟನೆ ನಡೆದಿಲ್ಲ. ಆದಷ್ಟು ಬೇಗ ದೆಹಲಿಯಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ನಮ್ಮ ಉದ್ದೇಶ ಎಂದರು.

    ದೆಹಲಿ ಸಂತ್ರಸ್ಥರಿಗೆ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಘೋಷಿಸಿದ ಪರಿಹಾರಕ್ಕೆ (ತಲಾ 25 ಸಾವಿರ ರೂ.) ಈವರೆಗೆ ಅಂದಾಜು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅವರಿಗೆ ನಾಳೆ ಹಣ ದೊರೆಯುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ಗಲಭೆಯಲ್ಲಿ ಬೀದಿ ದೀಪಗಳು ಹಾಳಾಗಿದ್ದು ಅವುಗಳ ರಿಪೇರಿಗೆ ಕ್ರಮ ಕೈಗೊಳ್ಳಲಾಗಿದೆ. ಹಿಂಸಾಚಾರದಲ್ಲಿ ಸರ್ಕಾರಿ ಶಾಲೆಗಳಿಗೆ ಯಾವುದೇ ಹಾನಿಯಾಗಿಲ್ಲ. ಈ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಅವುಗಳನ್ನು ನಂಬಬಾರದು ಎಂದು ಮನವಿ ಮಾಡಿಕೊಂಡರು.

    ಗಲಭೆಯಲ್ಲಿ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕವಾಗಿ ಉಳಿಯಲು ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲೇ ತಂಗಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts