21.7 C
Bengaluru
Tuesday, January 21, 2020

ಮಳೆಗಾಲವೂ ಜೀವಜಲಕ್ಕೆ ಹಾಹಾಕಾರ

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

< ಸಚ್ಚೇರಿಪೇಟೆಯ 100ಕ್ಕೂ ಅಧಿಕ ಬಾವಿಗಳಲ್ಲಿ ನೀರಿಲ್ಲ * ಸಂಕಷ್ಟದಲ್ಲಿ ಸಾರ್ವಜನಿಕರು>

ಹರಿಪ್ರಸಾದ್ ನಂದಳಿಕೆ ಬೆಳ್ಮಣ್

ಕೆಲವು ದಿನಗಳಿಂದ ಬಿಟ್ಟುಬಿಟ್ಟು ಸಾಧಾರಣ ಮಳೆಯಾಗುತ್ತಿದ್ದು, ಈಗಾಗಲೇ ಒಂದು ತಿಂಗಳ ಮಳೆಗಾಲ ಮುಗಿದಿದ್ದರೂ ಮುಂಡ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಚ್ಚೇರಿಪೇಟೆಯ 100ಕ್ಕೂ ಅಧಿಕ ಬಾವಿಗಳಲ್ಲಿ ಹನಿ ನೀರೂ ಇಲ್ಲ.

ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯ ಕಜೆ ಮಾರಿಗುಡಿ ಭಾಗದಿಂದ ಹಿಡಿದು ರೈಸ್ ಮಿಲ್‌ವರೆಗಿನ ಪರಿಸರದ ಮನೆಗಳ ಬಾವಿಗಳಲ್ಲಿ ನೀರಿಲ್ಲದೆ ಜನ ಕಂಗಾಲಾಗಿದ್ದಾರೆ. ಬೇಸಿಗೆಯಲ್ಲಿ ಎಲ್ಲ ಕಡೆ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದ್ದು, ಸಚ್ಚೇರಿಪೇಟೆಯಲ್ಲಿ ಮಳೆಗಾಲ ಆರಂಭವಾಗಿ ಜೂನ್ ತಿಂಗಳು ಕಳೆದರೂ ನೀರಿನ ಸಮಸ್ಯೆ ಪರಿಹಾರವಾಗಿಲ್ಲ.

ಬಾವಿಯಲ್ಲಿ ನೀರು ನಿಲ್ಲಬೇಕಾದರೆ ಪಕ್ಕದ ಶಾಂಭವಿ ನದಿಯಲ್ಲಿ ಒಂದೆರಡು ಸಲ ನೆರೆಯಾಗಬೇಕು. ಆದರೆ ಈ ಬಾರಿ ಮಳೆಯ ಕಣ್ಣಮುಚ್ಚಾಲೆಯಿಂದ ನದಿಯೇ ತುಂಬಿ ಹರಿದಿಲ್ಲ. ಈ ಹಿಂದೆ ಮಳೆಗಾಲದಲ್ಲಿ ಯಾವತ್ತೂ ಇಲ್ಲಿನ ಬಾವಿಗಳಲ್ಲಿ ನೆಲ ಕಾಣುತ್ತಿರಲಿಲ್ಲ ಎಂದು ಸಚ್ಚೇರಿಪೇಟೆಯ ವಸಂತಿ ಪೂಜಾರಿ ತಿಳಿಸಿದ್ದಾರೆ.

ಒರತೆ ನುಂಗಿದ ಬೋರ್‌ವೆಲ್: ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಹೆಚ್ಚು ಬೋರ್‌ವೆಲ್‌ಗಳ ನಿರ್ಮಾಣದಿಂದ ಭೂಮಿಯಲ್ಲಿ ನೀರಿನ ಒರತೆ ಕಡಿಮೆಯಾಗಿ ಬಾವಿ ನೀರಿನ ಪ್ರಮಾಣ ಕಡಿಮೆಯಾಗಿರಬಹುದೆಂದು ಅನುಮಾನಿಸಲಾಗಿದೆ. ಮುಂದೆ ಬೋರ್‌ವೆಲ್‌ಗಳಿಗೆ ಪರವಾನಗಿ ನೀಡಬಾರದೆಂದೂ ಈ ಭಾಗದ ಜನ ಒತ್ತಾಯಿಸಿದ್ದಾರೆ.

ಮಳೆಯ ಪ್ರಮಾಣವೂ ಕಡಿಮೆ: ಹಿಂದೆ ಜೂನ್, ಜುಲೈ ತಿಂಗಳಲ್ಲಿ ಅಪಾರ ಪ್ರಮಾಣದ ಮಳೆಯಾಗಿ ಶಾಂಭವಿ ನದಿ ತುಂಬಿ ಹರಿಯುತ್ತಿತ್ತು. ಕೆಲವೊಮ್ಮೆ ನೆರೆ ಸೃಷ್ಟಿಯಾಗುತ್ತಿತ್ತು. ಪರಿಣಾಮ ಪರಿಸರದ ಬಾವಿಗಳೂ ತುಂಬುತ್ತಿದ್ದವು. ಈ ಬಾರಿ ಮಳೆ ಪ್ರಮಾಣ ತೀರ ಕಡಿಮೆಯಾಗಿದೆ. ಆಗಸ್ಟ್, ಸೆಪ್ಟೆಂಬರ್‌ನಲ್ಲಾದರೂ ಉತ್ತಮ ಮಳೆ ಬಂದೀತು ಎಂಬ ನಿರೀಕ್ಷೆಯಲ್ಲಿ ಇಲ್ಲಿನ ಜನ ಕಾಯುತ್ತಿದ್ದಾರೆ. ಇಲ್ಲಿನ ಬಾವಿಗಳು ಬತ್ತಿ ಹೋಗಿದ್ದರೂ ವರ್ಷದ 12 ತಿಂಗಳೂ ಊರಿಗೆ ನೀರುಣಿಸುವ ಗ್ರಾಪಂನ ಸ್ವಜಲಧಾರಾ ಯೋಜನೆಯ ನೀರು ಇಲ್ಲಿನ ಜನರಿಗೆ ಕೊಂಚ ನೆಮ್ಮದಿ ನೀಡಿದೆ. ಹಿಂದೆ ಬೇಸಿಗೆಯಲ್ಲಿ ಮಾತ್ರ ಬಳಕೆಯಾಗುತ್ತಿದ್ದ ಪಂಚಾಯಿತಿ ನೀರು ಈಗ ವರ್ಷದ 12 ತಿಂಗಳೂ ಬಳಕೆಯಾಗುತ್ತಿದೆ.

ಮಾರಕವಾಯಿತೇ ಕಂಪನಿಗಳು?: ಮಳೆ ಪ್ರಮಾಣ ಕುಸಿತಕ್ಕೆ ಪರಿಸರದಲ್ಲಿರುವ ಕಂಪನಿಗಳು ಕಾರಣ ಎಂಬುದು ಸಾರ್ವಜನಿಕರ ದೂರು. ಕಂಪನಿಗಳಿಂದ ಹೊರಹೊಮ್ಮುವ ಬಿಸಿ ಹೊಗೆಯಿಂದಾಗಿ ಭಾರಿ ಹೊಡೆತ ಬೀಳುತ್ತಿದೆ. ಮೋಡಗಳು ನಮ್ಮಲ್ಲಿ ನಿಲ್ಲದೆ ಚದುರಿ ಹೋಗುತ್ತಿವೆ. ಅದರ ಪರಿಣಾಮ ನಮಗೆ ಮಳೆ ಪ್ರಮಾಣ ಕಡಿಮೆಯಾಗಿದೆ. ಕರಾವಳಿ ಪದ್ರೇಶದ ಸೂಕ್ಷ್ಮ ಪ್ರಕೃತಿಗೆ ವಿರುದ್ಧವಾಗಿ ಕೈಗಾರಿಕೆಗಳು ಸ್ಥಾಪನೆಗೊಂಡಿದ್ದು, ಅವಿಭಜಿತ ಜಿಲ್ಲೆ ಮರುಭೂಮಿಯಾಗುವಂಥ ಮುನ್ಸೂಚನೆ ಕಾಣುತ್ತಿದ್ದೇವೆ. ಈ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಎನ್ನುತ್ತಾರೆ ಇಲ್ಲಿನ ನಿವಾಸಿ ಶರತ್ ಶೆಟ್ಟಿ.

ಶಾಂಭವಿ ನದಿಯಲ್ಲಿ ಒಂದೆರಡು ನೆರೆ ಬಾರದೆ ನಮ್ಮ ಬಾವಿಗಳಲ್ಲಿ ನೀರಾಗುವುದಿಲ್ಲ. ಈ ಬಾರಿ ನೆರೆಯೇ ಇಲ್ಲ. ಹಾಗಾಗಿ ನಮ್ಮ ಬಾವಿಯಲ್ಲಿ ಇನ್ನೂ ಒರತೆ ಉಂಟಾಗಿಲ್ಲ.
ವಸಂತಿ ಪೂಜಾರಿ, ಸ್ಥಳೀಯ ನಿವಾಸಿ

ಇಷ್ಟು ಮಳೆ ಬಂದರೂ ಸಚ್ಚೇರಿಪೇಟೆ ರಸ್ತೆಯ ಒಂದು ಭಾಗದಲ್ಲಿ ಮಾತ್ರ ನೂರಾರು ಬಾವಿಗಳಲ್ಲಿ ನೀರಿಲ್ಲದಿರುವುದು ಕುತೂಹಲವೇ ಸರಿ. ಇಲ್ಲಿ ಡಿಸೆಂಬರ್ ತಿಂಗಳಿಂದಲೇ ಪಂಚಾಯಿತಿ ನೀರು ಬಳಕೆಯಾಗುತ್ತಿದೆ. ಇದಕ್ಕೆ ಕಾರಣ ಹುಡುಕಲಾಗುತ್ತಿದೆ.
ಶುಭಾ ಪಿ.ಶೆಟ್ಟಿ, ಮುಂಡ್ಕೂರು ಗ್ರಾಪಂ ಅಧ್ಯಕ್ಷೆ

ಸ್ವಲ್ಪ ಪ್ರಮಾಣದಲ್ಲಿ ಮಳೆಯಾದರೂ ನಮ್ಮ ಬಾವಿಯಲ್ಲಿ ಇನ್ನೂ ನೀರಿನ ಹನಿಯಿಲ್ಲ. ನಾವು ಈಗ ಅರ್ಧ ಕಿ.ಮೀ ದೂರದಿಂದ ನೀರನ್ನು ಹೊತ್ತು ತರುವಂತಾಗಿದೆ.
ಕರುಣಾಕರ್, ಸ್ಥಳೀಯ ನಿವಾಸಿ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...