More

    ಸಿಎಎ ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ; ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ ಶಾ ಘೋಷಣೆ

    ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಟಿಜನ್​ಶಿಪ್ ಅಮೆಂಡ್​ಮೆಂಟ್​ ಆ್ಯಕ್ಟ್​- ಸಿಎಎ) ಕೇಂದ್ರ ಸರ್ಕಾರವು ಅನುಷ್ಠಾನಗೊಳಿಸಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ…
    ಹೀಗಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಖಡಾಖಂಡಿತವಾಗಿ ಸಾರಿದ್ದಾರೆ.

    ಲೋಕಸಭೆ ಚುನಾವಣೆ ಪ್ರಚಾರವನ್ನು ಪ್ರಾರಂಭಿಸಲು ಬಿಜೆಪಿ ಇಲ್ಲಿ ಆಯೋಜಿಸಿದ್ದ ಬೃಹತ್​ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾ, ಸಾಕಷ್ಟು ವಿವಾದಗಳನ್ನು ಸೃಷ್ಟಿಸಿರುವ ಸಿಎಎ ಕುರಿತು ತಮ್ಮ ಪಕ್ಷದ ಸ್ಪಷ್ಟ ನಿಲುವನ್ನು ಪುನರುಚ್ಚರಿಸಿದರು.

    ಮಮತಾ ಬ್ಯಾನರ್ಜಿ ಸಿಎಎ ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಇದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ ಎಂದರು.

    ತುಷ್ಟೀಕರಣ, ಒಳನುಸುಳುವಿಕೆ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರ ಮುಂತಾದ ವಿಷಯಗಳ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮುಂದಿನ ವಿಧಾನಸಭಾ ಚುನಾವಣೆ ಮಮತಾ ಬ್ಯಾನರ್ಜಿ ಸರ್ಕಾರವನ್ನು ಕಿತ್ತೆಸೆದು, ಬಿಜೆಪಿಯನ್ನು ಆಯ್ಕೆ ಮಾಡುವಂತೆ ಜನರಿಗೆ ಕರೆ ನೀಡಿದರು.

    2026ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. 2024 ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯ ಸಾಧನೆಯು ವಿಧಾನಸಭಾ ಚುನಾವಣೆಯಲ್ಲಿ ಅದರ ಗೆಲುವಿನ ಅಡಿಪಾಯ ಹಾಕಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

    2019ರಲ್ಲಿ ರಾಜ್ಯದ 42 ಲೋಕಸಭೆ ಸ್ಥಾನಗಳಲ್ಲಿ ಬಿಜೆಪಿಯು 18 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಇದುವರೆಗೆ ಆ ಪಕ್ಷದ ಅತ್ಯಧಿಕ ಸಾಧನೆಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts