ಕರ್ನಾಟಕ ವಿಧಾನಸಭಾ ಚುನಾವಣೆ | ಮೊದಲ ದಿನವೇ 221 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ; ಒಟ್ಟು ವಿವರ ಇಂತಿವೆ…

ec
Published on

ಬೆಂಗಳೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭವಾಗಿದ್ದು,ಮೊದಲ ದಿನವೇ 221 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಬಿಜೆಪಿ- 27
ಕಾಂಗ್ರೆಸ್‌- 26
ಜೆಡಿಎಸ್‌- 12
ಆಮ್​ ಆದ್ಮಿ- 10
ಬಿಎಸ್​ಪಿ- 1
ಪಕ್ಷೇತರ- 45

ಅಂತೆಯೇ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳಿಂದ 100 ಮಂದಿ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಧಾರವಾಢ ಜಿಲ್ಲೆಯಲ್ಲಿ ಮೊದಲ ದಿನ 7 ನಾಮಪತ್ರಗಳು ಸಲ್ಲಿಕೆಯಾಗಿವೆ. ಬಾಗಲಕೋಟೆ ಜಿಲ್ಲೆಯಲ್ಲಿ ಮೊದಲ ದಿನ ಏಳು ಮತಕ್ಷೇತ್ರಗಳು ಸೇರಿ 11 ನಾಮಪತ್ರಗಳು ಸಲ್ಲಿಕೆಯಾಗಿವೆ. ಬಳ್ಳಾರಿ ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ದಿನ 5 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಪ್ರಿಲ್ 15ರಂದು ಶಿಗ್ಗಾವಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಒಳ್ಳೆಯ ಮೂಹುರ್ತ ಹಿನ್ನೆಲೆ ಎಪ್ರಿಲ್ 15 ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ. ಬಳಿಕೆ ಎಪ್ರಿಲ್ 19ಕ್ಕೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net