ಚಾ.ನಗರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಬಿಎಸ್ಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

ಚಾಮರಾಜನಗರ: ಚಾ.ನಗರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಬಿಎಸ್ಪಿ ಅಭ್ಯರ್ಥಿಯಾಗಿ ಡಾ. ಶಿವಕುಮಾರ್ ಅವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ಮಂಗಳವಾರ ಬೆಳಗ್ಗೆ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಅಭ್ಯರ್ಥಿ ಶಿವಕುಮಾರ್​, ಶಾಸಕ ಎನ್.ಮಹೇಶ್ ಜತೆಗೂಡಿ ನಗರದ ಸಾರಾನಾಥ ಬೌದ್ದ ವಿಹಾರಕ್ಕೆ ಭೇಟಿ ನೀಡಿ ಬೌದ್ದ ವಂದನೆ ಸಲ್ಲಿಸಿದರು. ನಂತರ ರಾಮಸಮುದ್ರ ಬಡಾವಣೆಯ ಬಳಿಯ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಚಾಮರಾಜೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಗೆಲುವಿಗೆ ಪ್ರಾರ್ಥಿಸಿದರು.

ನಂತರ ಕಾರ್ಯಕರ್ತರ ಬೃಹತ್ ಮೆರವಣಿಗೆಯ ಮೂಲಕ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಸಾಗಿ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರಕಲವಾಡಿನಾಗೇಂದ್ರ,ಮಾದೇಶ್ ಉಪ್ಪಾರ್, ಸಮೀವುಲ್ಲಾ ಇತರರು ಹಾಜರಿದ್ದರು.