More

    ಹಿರಿಯ ನಟಿ, ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್​

    ರಾಮ್​ಪುರ: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ಅವರಿಗೆ ಉತ್ತರ ಪ್ರದೇಶ ನ್ಯಾಯಾಲಯವು ಶನಿವಾರ ಜಾಮೀನು ರಹಿತ ವಾರೆಂಟ್​ ಹೊರಡಿಸಿದೆ.

    ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ 57 ವರ್ಷದ ಜಯಪ್ರದಾ ಅವರು ಉತ್ತರ ಪ್ರದೇಶದ ರಾಮ್​ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಚುನಾವಣಾ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಇದೀಗ ವಾರೆಂಟ್​ ಹೊರಡಿಸಿದ್ದು, ಮುಂದಿನ ಏಪ್ರಿಲ್​ 20ರಂದು ವಿಚಾರಣೆ ನಡೆಯಲಿದೆ.

    ಅಂದಹಾಗೆ ಲೋಕಸಭಾ ಚುನಾವಣೆಯಲ್ಲಿ ಜಯಪ್ರದಾ ಅವರು ಸಮಾಜವಾದಿ ಪಕ್ಷದ ಪ್ರತಿಸ್ಪರ್ಧಿ ಅಜಂ ಖಾನ್​ ವಿರುದ್ಧ ಸುಮಾರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಹೀನಾಯ ಸೋಲನ್ನು ಅನುಭವಿಸಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts