More

    ರಾಜಸ್ಥಾನ ಚುನಾವಣೆ; ಜನರ ವಿಶ್ವಾಸವನ್ನು ಗೆಲ್ಲಲಾಗದ ಬಿಜೆಪಿ EDಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಅಶೋಕ್​ ಗೆಹ್ಲೋಟ್

    ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಕಾಂಗ್ರೆಸ್​ಗೆ ಕಿರುಕುಳ ನೀಡಲು ಬಿಜೆಪಿ ಜಾರಿ ನಿರ್ದೇಶನಾಲಯವನ್ನು (ED) ಬಳಸುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಆರೋಪಿಸಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ರಾಜಸ್ಥಾನದಲ್ಲಿ ಕಾಂಗ್ರೆಸ್​ ಮತ್ತೊಮ್ಮೆ ಅಧಿಕಾರಕ್ಕೇರುತ್ತದೆ ಎಂಬ ವಿಚಾರ ಬಿಜೆಪಿಯವರ ನಿದ್ದೆಗೆಡಿಸಿದ್ದು, ಜನರ ವಿಶ್ವಾಸವನ್ನು ಗೆಲ್ಲಲಾಗದೆ ಬಿಜೆಪಿ ಕಾಂಗ್ರೆಸ್​ಗೆ ಕಿರುಕುಳ ನೀಡಲು ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

    ಇದನ್ನೂ ಓದಿ: VIDEO| ಯುವತಿಯರು ನಾಚಿ ನೀರಾಗುವಂತೆ ಗಾರ್ಬಾ ನೃತ್ಯ ಮಾಡಿದ ಅಜ್ಜಿ

    2021 ರ ರಾಜಸ್ಥಾನ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕೋಚಿಂಗ್ ಇನ್‌ಸ್ಟಿಟ್ಯೂಟ್ ಸೇರಿದಂತೆ ಇತರರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

    ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts