More

    ಅಹಿಂಸಾ ಮಾರ್ಗ ಅನುಸರಣೆಗೆ ಪ್ರೇರೇಪಣೆ

    ರಾಯಚೂರು: ಜೈನ ಧರ್ಮದ 24ನೇ ತೀರ್ಥಂಕರ ಭಗವಾನ್ ಮಹಾವೀರರ ತತ್ತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ ಹೇಳಿದರು.

    ಕನ್ನಡ ಭವನದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಭಗವಾನ್ ಮಹಾವೀರರ ಜಯಂತಿ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ಬದುಕಬೇಕು ಮತ್ತು ಬದುಕಲು ಬಿಡಬೇಕು ಎನ್ನುವ ಸಂದೇಶ ಸಾರುವ ಮೂಲಕ ಮಹಾವೀರರು ಅಹಿಂಸಾ ಮಾರ್ಗ ಅನುಸರಿಸುವಂತೆ ಪ್ರೇರೇಪಿಸಿದರು ಎಂದರು.

    ಜನರಲ್ಲಿ ಒಳ್ಳೆಯ ವಿಚಾರಗಳನ್ನು ಮೂಡಿಸುವುದರ ಜತೆಗೆ ಧರ್ಮ ಮಾರ್ಗದಲ್ಲಿ ನಡೆಯುವಂತೆ ಮಾಡುವಲ್ಲಿ ಮಹಾವೀರರ ಪಾತ್ರ ಮಹತ್ವದ್ದಾಗಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದು ಮಂಗಳಾ ನಾಯಕ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts