More

    ಮುಂದಿನ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ: ಮತ್ತೆ ‘ಕತ್ತಿ’ವರಸೆ

    ಬೆಳಗಾವಿ: ಮುಂಬರುವ 2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಮತ್ತೆ ಭವಿಷ್ಯ ನುಡಿದಿದ್ದಾರೆ.

    ಬೆಳಗಾವಿಗೆ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾಯಂ ಸಂಚಾರಿ ಪೀಠ ಮಂಜೂರು ಮಾಡಿಸಿದ್ದಕ್ಕೆ ಜಿಲ್ಲಾ ವಕೀಲರ ಸಂಘದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

    ಪ್ರತ್ಯೇಕ ರಾಜ್ಯಕ್ಕೆ ಬೇಕಾದ ಎಲ್ಲ ಮೂಲಸೌಲಭ್ಯಗಳು ನಮ್ಮಲ್ಲಿವೆ. ಧಾರವಾಡದಲ್ಲಿ ಹೈಕೋರ್ಟ್, ಬೆಳಗಾವಿಯಲ್ಲಿ ಸುವರ್ಣಸೌಧ ಇದೆ. ಕಿತ್ತೂರಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಚರ್ಚೆಗಳು ನಡೆದಿದೆ. ಹಾಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲು ಎಲ್ಲ ಮೂಲ ಸೌಲಭ್ಯಗಳಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

    2024ರ ನಂತರ ದೇಶದಲ್ಲಿ 50 ಹೊಸ ರಾಜ್ಯಗಳು ಉದಯವಾಗಲಿವೆ. ಆಗ ಕರ್ನಾಟಕವೂ ಎರಡು ಭಾಗವಾಗಲಿದೆ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜಧಾನಿ ಬೆಂಗಳೂರಲ್ಲೀಗ ಸಂಚಾರ ದಟ್ಟನೆ ಸಮಸ್ಯೆಯೂ ಹೆಚ್ಚಾಗಿದೆ. 10 ಕಿ.ಮೀ. ಹೋಗಲು ಒಂದು ಗಂಟೆ ಬೇಕು, ಮನೆಯಿಂದ ವಿಧಾನಸೌಧಕ್ಕೆ ಹೋಗಲು ಒಂದೂವರೆ ಗಂಟೆ ಬೇಕು. ಹೀಗಾಗಿ ಉತ್ತರ ಕರ್ನಾಟಕ ರಾಜ್ಯವಾಗಲೇ ಬೇಕು ಎಂದರು.

    ವಿಶ್ವಪರ್ಯಟನೆಯಲ್ಲಿ ಗಗನಸುಖಿ: ನಮಸ್ಕಾರ ದೇವರು.. ಇದು ಡಾಕ್ಟರ್ ಬ್ರೋ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts