More

    ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ: ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್​ಷಾ

    ನವದೆಹಲಿ: ಪೌರತ್ವ ಕಾಯ್ದೆ ತಿದ್ದುಪಡಿ ಜಾರಿ ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರ ಕುರಿತು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಮಂಗಳವಾರ ಸಭೆ ನಡೆಸಿದರು.

    ಸಭೆಯಲ್ಲಿ ದೆಹಲಿ ಲೆಫ್ಟಿನೆಂಟ್​ ಗವರ್ನರ್​ ಅನಿಲ್​ ಬೈಜಾಲ್​, ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್​, ಗೃಹ ಕಾರ್ಯದರ್ಶಿ ಅಜಯ್​ ಭಲ್ಲಾ, ಗುಪ್ತಚರ ಇಲಾಖೆ ನಿರ್ದೇಶಕ ಅರವಿಂದ ಕುಮಾರ್​, ದೆಹಲಿ ಪೊಲೀಸ್​ ಆಯುಕ್ತ ಅಮೂಲ್ಯ ಪಟ್ನಾಯಕ್​, ಕಾಂಗ್ರೆಸ್​ ಮುಖಂಡ ಸುಭಾಷ್ ಮಲ್ಹೋತ್ರಾ, ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಸಭೆಯಲ್ಲಿ ಇದ್ದರು.

    ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಓರ್ವ ಮುಖ್ಯಪೇದೆ ಸೇರಿದಂತೆ 7 ಮಂದಿ ಬಲಿಯಾಗಿದ್ದಾರೆ. ಹಲವು ಕಟ್ಟಡಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಷಾ ಅವರು ಸಭೆ ನಡೆಸಿ ಚರ್ಚೆ ನಡೆಸಿದರು.

    ಪ್ರತಿಭಟನೆಗೆ ಗಡಿಯಾಚೆಯಿಂದ ಜನರು ಬರುತ್ತಿದ್ದಾರೆ ಎಂಬ ಮಾಹಿತಿ ಇದೆ. ಗಡಿಗಳನ್ನು ಮುಚ್ಚಬೇಕು ಎಂದು ಸಭೆಯಲ್ಲಿ ಕೇಂದ್ರ ಗೃಹ ಸಚಿವರ ಗಮನ ಸೆಳೆದಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಸಭೆ ನಂತರ ಹೇಳಿದರು. (ಏಜೆನ್ಸೀಸ್​)

    ಈಶಾನ್ಯ ದೆಹಲಿ ಹಿಂಸಾಚಾರ: ಶಾಂತಿ ಕಾಪಾಡಲು ಸಿಎಂ ಕೇಜ್ರಿವಾಲ್ ಮನವಿ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts