More

    ಈಶಾನ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧೆ

    ಬಳ್ಳಾರಿ: ಜೂನ್‌ನಲ್ಲಿ ನಡೆಯುವ ಈಶಾನ್ಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ನಾರಾ ಪ್ರತಾಪ್ ರೆಡ್ಡಿ ತಿಳಿಸಿದರು.

    ಇದನ್ನೂ ಓದಿ: ಅಭಿವೃದ್ಧಿಗಾಗಿ ಕ್ಷೇತ್ರಕ್ಕೆ ಪ್ರತ್ಯೇಕ ಪ್ರಣಾಳಿಕೆ, ಹೊಸ ಹುಲಿ ಎಂಟ್ರಿ ಕೊಡಲಿದೆ: ‘ಕೈ’ ಅಭ್ಯರ್ಥಿ ಸಂಯುಕ್ತಾ ಪಾಟೀಲ್‌

    ನಗರದ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈಗಾಗಲೇ ಎಎಪಿ ಪಕ್ಷ ಬೆಂಬಲ ನೀಡಿದ್ದು, ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕಲ್ಯಾಣ ಕರ್ನಾಟಕದಲ್ಲಿ ನನ್ನ ಪರವಾಗಿ ಪ್ರಚಾರ ನಡೆಸಲಿದ್ದಾರೆ.

    ಕಳೆದ 2018ರಲ್ಲಿ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದೆ. ಆದರೆ, ಸಾವಿರಾರು ಸಂಖ್ಯೆಯ ಕುಲಗಟ್ಟೆ ಮತಗಳಿಂದ ಪರಾಭವಗೊಂಡಿದ್ದರೂ, ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರವಾಗಿ ಪದವೀಧರ, ಶೈಕ್ಷಣಿಕ ಮತ್ತು ಸಾಮಾಜಿಕ ಸಂಘಟನೆಗಳೊಂದಿಗೆ ನಿಕಟ ಸಂಪರ್ಕದಲ್ಲಿರುವೆ.

    ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸದೆ ಇರುವುದು ಶೋಚನೀಯ ಸಂಗತಿ. ನನಗೆ ಹಲವು ಸಂಘಟನೆಗಳ ಬೆಂಬಲ ನೀಡುವ ಭರವಸೆಯಿದೆ. ಅದರಂತೆ, ಸಿಪಿಎಂ ಪಕ್ಷ ಬೆಂಬಲ ನೀಡಲಿದ್ದು, ಸಂಘಟನೆಕಾರರು ಕಲ್ಯಾಣ ಕರ್ನಾಟಕದ ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದರು. ಮುಖಂಡರಾದ ಸತ್ಯಬಾಬು, ವೈ.ಗುರುಶಾಂತಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts