More

    ಒಂದೇ ಒಂದು ಜನಪರ ಯೋಜನೆ ಜಾರಿಯಾಗಿಲ್ಲ

    ಮೂಡಿಗೆರೆ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳಾದರೂ ಒಂದೇ ಒಂದು ಜನಪರ ಹೊಸ ಯೋಜನೆ ಘೋಷಣೆ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.

    ಬುಧವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಬೋಗಸ್ ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಇಂದಿಗೂ ಪೂರ್ಣವಾಗಿ ತಲುಪಿಲ್ಲ. ಇದರಿಂದ ಕಾಂಗ್ರೆಸ್ ಸೋಲನ್ನು ಒಪ್ಪಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ರಾಜ್ಯದ ಜನರಿಗೆ ಕಾಂಗ್ರೆಸ್ ಅನ್ಯಾಯ ಮಾಡುವುದಕ್ಕೆ ಬಿಜೆಪಿ ಬಿಡುವುದಿಲ್ಲ ಎಂದು ಹೇಳಿದರು.
    ಗ್ಯಾರಂಟಿ ಯೋಜನೆಯಿಂದ ಶಾಲೆಗೆ ತೆರಳುವ ಮಕ್ಕಳು ಬಸ್ಸಿಲ್ಲದೆ ಪರದಾಡುತ್ತಿದ್ದಾರೆ. ಬರಗಾಲದ ಸಂದರ್ಭ ರೈತರಿಗೆ ಕನಿಷ್ಠ 7 ತಾಸು ತ್ರೀೇಸ್ ವಿದ್ಯುತ್ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಹಳ್ಳ ಹಿಡಿದಿದೆ. ಉಚಿತ ಯೋಜನೆಗಳಿಂದ ಜನ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು.
    ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾರಿಸುವುದಕ್ಕೂ ರಾಜ್ಯ ಸರ್ಕಾರ ವಿರೋಧ ಮಾಡಿದ್ದರಿಂದ ಪ್ರತಿಯೊಬ್ಬ ರಾಮಭಕ್ತರಿಗೆ ನೋವುಂಟಾಗಿದೆ. ರಾಜ್ಯದಲ್ಲಿ ಹನುಮ ಧ್ವಜ ಹಾರಿಸಲು ಕಾಂಗ್ರೆಸ್ ವಿರೋಧ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಮೊದಲಾದ ಪೂರ್ವರಾಜ್ಯದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಮತ್ತೊಂದೆಡೆ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ನಂತರ ಇಡೀ ದೇಶದಲ್ಲಿ ಉಂಟಾಗಿರುವ ವಾತಾವರಣದಿಂದ ಕಾಂಗ್ರೆಸ್ ಭಯಗೊಂಡಿದೆ ಎಂದು ಹೇಳಿದರು.
    ಲೋಕಸಭಾ ಚುನಾವಣೆ ಘೋಷಣೆಯಾಗುವ ಮುನ್ನವೇ ಕಾಂಗ್ರೆಸ್ ನಾಯಕರು ಸೋಲು ಒಪ್ಪಿಕೊಳ್ಳಲು ಆರಂಭಿಸಿದ್ದಾರೆ. ಬಿಜೆಪಿಯಿಂದ ಈಗಾಗಲೇ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯೊಂದಿಗೆ ರಾಜ್ಯದಲ್ಲಿ 28 ಕ್ಷೇತ್ರದಲ್ಲೂ ಗೆಲ್ಲುವುದರಲ್ಲಿ ಸಂಶಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಎಂಎಲ್‌ಸಿ ಎಂ.ಕೆ.ಪ್ರಾಣೇಶ್, ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಎಸ್.ರಘು, ಮುಖಂಡರಾದ ದೀಪಕ್ ದೊಡ್ಡಯ್ಯ, ಮನೋಜ್ ಹಳೇಕೋಟೆ, ಪ್ರಮೋದ್ ದುಂಡುಗ, ಕಲ್ಲೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts