More

    ಎಲ್ಲ ಹಾವುಗಳು ವಿಷಕಾರಿಯಲ್ಲ

    ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲ ಹಾವುಗಳು ವಿಷಕಾರಿಯಲ್ಲ ಎಂದು ಉರಗ ರಕ್ಷಕ ಹಾಗೂ ನಗರಪಾಲಿಕೆ ಮಾಜಿ ಸದಸ್ಯ ಸ್ನೇಕ್ ಶ್ಯಾಮ್ ಹೇಳಿದರು.


    ನಗರದ ಜೆಎಲ್ಬಿ ರಸ್ತೆಯ ಇಂಜಿನಿಯರಿಂಗ್ ಸಂಸ್ಥೆಯ ಮುಂಭಾಗ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ಹಾಗೂ ಪರಿಸರ ಸ್ನೇಹಿ ತಂಡದ ಸಹಯೋಗದಲ್ಲಿ ಸೋಮವಾರ ‘ಹಾವುಗಳ ದಿನ’ದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ನಾಗರಹಾವು, ಕಾಳಿಂಗ ಸರ್ಪ ವಿಷಕಾರಿಯಾಗಿದ್ದು, ಹಪ್ಪಟೆ, ಕೇರೆ ಹಾವು, ಹಸಿರು ಹಾವುಗಳು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ ಎಂದು ಸಲಹೆ ನೀಡಿದರು.

    ಹಾವು ಕಚ್ಚಿದಾಗ ಬಹುತೇಕ ಜನರು ಭಯಪಟ್ಟು ಹೃದಯಾಘಾತದಿಂದ ಸಾವಿಗೀಡಾಗುತ್ತಾರೆ. ಹಾವು ಕಚ್ಚಿದಾಗ ವ್ಯಕ್ತಿಗೆ ಧೈರ್ಯ ತುಂಬಬೇಕು ಮತ್ತು ಸಾಧ್ಯವಾದಷ್ಟು ಬೇಗ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದ ಅವರು, ಅರಣ್ಯ ಇಲಾಖೆಯು ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.ಇದೇ ವೇಳೆ ಸ್ನೇಕ್ ಶ್ಯಾಮ್ ಅವರನ್ನು ಸನ್ಮಾನಿಸಲಾಯಿತು. ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಮುಖಂಡರಾದ ಜಿ.ರಾಘವೇಂದ್ರ, ಎಸ್.ಎನ್.ರಾಜೇಶ್, ರಾಕೇಶ್, ಪ್ರಸನ್ನ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts