More

    ಶ್ರೀರಾಮ ವಿಗ್ರಹದ ಪ್ರಾಣಪ್ರತಿಷ್ಠಾಪನೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಭಾಗವಹಿಸುತ್ತಿಲ್ಲ, ಯಾಕೆ ಗೊತ್ತಾ ?

    ಮುಂಬೈ: ರಾಮಮಂದಿರದಲ್ಲಿ ಬಾಲರಾಮನ ವಿಗ್ರಹದ ಪ್ರಾಣಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ. ಉದ್ಘಾಟನಾ ಸಮಾರಂಭ ಮುಗಿದ ನಂತರ ಸಂಪುಟ ಸಚಿವರು, ಶಾಸಕರು ಮತ್ತು ಲೋಕಸಭೆ ಸಂಸದರೊಂದಿಗೆ ಅಯೋಧ್ಯೆ ರಾಮನ ದರ್ಶನ ಮಾಡುತ್ತೇವೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ.

    ಇದನ್ನೂ ಓದಿ:ರಾಮಮಂದಿರ ಕಾರ್ಯಕ್ರಮ ನೇರ ಪ್ರಸಾರ ನಿಷೇಧಿಸಿಲ್ಲ: ನಿರ್ಮಲಾ ಸೀತಾರಾಮನ್ ಆರೋಪಕ್ಕೆ ಸ್ಟಾಲಿನ್ ಸರ್ಕಾರದ ಸ್ಪಷ್ಟನೆ

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಯೋಧ್ಯೆಯಲ್ಲಿ ನಡೆಯುವ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ಬೆರಳೆಣಿಕೆಯಷ್ಟು ಜನ ಸೇರುವ ಬದಲು ಸಂಪುಟದ ಸಚಿವರು, ಶಾಸಕರು ಮತ್ತು ಸಂಸದರನ್ನು ಕರೆದುಕೊಂಡು ಹೋಗಲು ನಿರ್ಧರಿಸಿದ್ದೇನೆ ಎಂದರು.

    ರಾಮಮಂದಿರ ದೇವಸ್ಥಾನ ನಮ್ಮ ನಂಬಿಕೆ ಮತ್ತು ಹೆಮ್ಮೆಯ ಸಂಗತಿ. ನಮ್ಮೊಂದಿಗೆ ಅಧಿಕಾರಿಗಳು ಮತ್ತು ಭಕ್ತರನ್ನು ಸಹ ಅಯೋಧ್ಯೆಗೆ ಕರೆದೊಯ್ಯಲು ಬಯಸಿದ್ದೇನೆ ಎಂದು ಹೇಳಿದರು.

    ಸೋಮವಾರ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೂ ಮುನ್ನ ರಾಜ್ಯಾದ್ಯಂತ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ದೀಪಗಳಿಂದ ಅಲಂಕರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಶಿಂಧೆ ಅವರು ಹೇಳಿದರು.

    ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌, ಫೆಬ್ರುವರಿಯಲ್ಲಿ ರಾಮನ ಸೇವೆಗೆ ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿದ್ದರು.

    ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts