ಎರಡನೇ ಪತ್ನಿ, ಮಕ್ಕಳ ಬಗ್ಗೆ ಮಾಹಿತಿ ನೀಡದ ಆರೋಪ: ಸಿಎಂ ಕುಮಾರಸ್ವಾಮಿ ವಿರುದ್ಧ ವಿಚಾರಣೆ

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಗೆ ಮತ್ತೊಂದು ತಲೆನೋವು ಎದುರಾಗಿದ್ದು, 2ನೇ ಪತ್ನಿ ಮತ್ತು ಮಕ್ಕಳ ಬಗ್ಗೆ ಮಾಹಿತಿ ನೀಡದ ಆರೋಪ ಕೇಳಿಬಂದಿದೆ.

ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 2ಕ್ಕೆ ವಿಚಾರಣೆ ನಿಗದಿ ಮಾಡಿ ಆದೇಶ ಹೊರಡಿಸಿದೆ.

2018ರ ಚುನಾವಣಾ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿದ್ದು, ಸಿಎಂ 2ನೇ ಪತ್ನಿ, ಮಕ್ಕಳ ಬಗ್ಗೆ ಮಾಹಿತಿ ನೀಡಿಲ್ಲ. ಉದ್ದೇಶಪೂರ್ವಕವಾಗಿಯೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ತನಿಖೆಗೆ ಆದೇಶಿಸುವಂತೆ ಪ್ರಜ್ಞಾವಂತ ನಾಗರಿಕ ಸಮಿತಿ ಅಧ್ಯಕ್ಷ ಆನಂದ್ ಮನವಿ ಮಾಡಿದ್ದರು.

ಎರಡನೇ ಪತ್ನಿ ರಾಧಿಕಾ ಕುಮಾರಸ್ವಾಮಿ, ಮಗಳು ಶಮಿಕಾ ಕುಮಾರಸ್ವಾಮಿ ಮತ್ತು‌ ನಿಖಿಲ್ ಕುಮಾರಸ್ವಾಮಿ ಹೆಸರಲ್ಲಿ ಕೋಟ್ಯಾಂತರ ಆಸ್ತಿ ಇದೆ. ಆದನ್ನು ಮರೆಮಾಚಲು ಆಫಿಡವಿಟ್‌ನಲ್ಲಿ ಉದ್ದೇಶ ಪೂರ್ವಕವಾಗಿ ಉಲ್ಲೇಖಿಸಿಲ್ಲ. ಈ ಬಗ್ಗೆ ತನಿಖೆಗೆ ಆದೇಶಿಸಬೇಕು. ಸೂಕ್ತ ತನಿಖಾ ಸಂಸ್ಥೆಗೆ ಪ್ರಕರಣದ ವಿಚಾರಣೆಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಮನವಿ ಪುರಸ್ಕರಿಸಿರುವ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್ ಅವರು ಮೇ 2ಕ್ಕೆ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ. (ದಿಗ್ವಿಜಯ ನ್ಯೂಸ್)

2 Replies to “ಎರಡನೇ ಪತ್ನಿ, ಮಕ್ಕಳ ಬಗ್ಗೆ ಮಾಹಿತಿ ನೀಡದ ಆರೋಪ: ಸಿಎಂ ಕುಮಾರಸ್ವಾಮಿ ವಿರುದ್ಧ ವಿಚಾರಣೆ”

  1. This family is power full and deceive people of Karnataka always and pretend as if they are for poor. It should be thoroughly investigated by Central Agencies as Thousands of Crores if rupees estate and properties are involved and the faces of Devegouda family exposed to Society at large.

Comments are closed.