More

    ಜೋಶಿ, ಬೆಲ್ಲದ ಘನತೆಗೆ ತಕ್ಕುದಲ್ಲ

    ಹುಬ್ಬಳ್ಳಿ: ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಬೇಕು. ಧರ್ಮ, ಜಾತಿ ಮತ್ತು ಒಂದು ಕೋಮಿನ ವಿರುದ್ಧ ನಿರಂತರವಾಗಿ ಹೇಳಿಕೆ ನೀಡುತ್ತಿರುವುದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಘನತೆಗೆ ತಕ್ಕುದಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಟೀಕಿಸಿದ್ದಾರೆ.

    ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದರು ನಡೆದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿತರ ಬಿಡುಗಡೆ ಕುರಿತು ಕೇಂದ್ರ ಸಚಿವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಈ ಪ್ರಕರಣದಲ್ಲಿ ಶೇ.90ರಷ್ಟು ಅಮಾಯಕರನ್ನು ಬಂಧಿಸಲಾಗಿದೆ ಎಂಬುದನ್ನು ಸಚಿವರು ಮೊದಲು ಅರಿತುಕೊಳ್ಳಬೇಕು. ರಾಜಕೀಯ ದುರುದ್ದೇಶದಿಂದ ಬಹುತೇಕ ಅಮಾಯಕರನ್ನೇ ಬಂಧಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಅವರ ಮೇಲೆ ಉದ್ದೇಶ ಪೂರ್ವಕವಾಗಿ ದೇಶದ್ರೋಹದ ಪ್ರಕರಣ ದಾಖಲು ಮಾಡಲಾಗಿದೆ ಎಂದು ಹೇಳಿದ್ದಾರೆ.

    ಅಮಾಯಕರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಗಿದೆಯಷ್ಟೇ. ಅದನ್ನೇ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿರುವ ಸಚಿವ ಜೋಶಿ ಅವರು ಆರೋಪಿಗಳನ್ನು ಬಿಡುಗಡೆ ಮಾಡಿದರೆ ಹೋರಾಟ ಮಾಡುವುದಾಗಿ ಮನಸೋ ಇಚ್ಛೆ ಹೇಳಿಕೆ ನೀಡಿ ಜನರ ದಿಕ್ಕು ತಪ್ಪಿಸಿ ಚುನಾವಣೆಗೆ ರಹದಾರಿ ಮಾಡಿಕೊಳ್ಳುತ್ತಿರುವುದು ಕೆಳಮಟ್ಟದ ರಾಜಕೀಯವಾಗಿದೆ ಎಂದು ಟೀಕಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts