More

    ಕ್ವಾರಂಟೈನ್‌ನಲ್ಲಿರದೆ ಮನೆಯಲ್ಲಿ ವಾಸ

    ಸಂಬರಗಿ: ಮಹಾರಾಷ್ಟ್ರ – ಕರ್ನಾಟಕ ಗಡಿ ಗ್ರಾಮಗಳಾದ ಖಿಳೇಗಾಂವ, ಪಾಂಡೆಗಾಂವ, ಅಜೂರ ಚೆಕ್‌ಪೋಸ್ಟ್‌ನಲ್ಲಿ ಸಿಬ್ಬಂದಿ ಇಲ್ಲದ ಪರಿಣಾಮ ಮುಂಬೈ, ಪುಣೆಯಿಂದ ಬರುತ್ತಿರುವ ಕ್ವಾರಂಟೈನ್‌ನಲ್ಲಿ ಇರದೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ.

    ಇತ್ತೀಚೆಗೆ ಮುಂಬೈಯಿಂದ ಅನಂತಪುರ 10 ಜನ, ಖಿಲೇಗಾಂವ ಗ್ರಾಮದ 6 ಜನರನ್ನು ಗ್ರಾಮ ಹೊರವಲಯದ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿ ಇಟ್ಟಿದ್ದಾರೆ. ಆದರೆ, ಶಿರೂರ ಗ್ರಾಮದ 19 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಶಾಲೆಯಲ್ಲಿ ಕ್ವಾರಂಟೈನ್ ಇಡುವಂತೆ ಸೂಚಿಸಿದರು. ಗ್ರಾಮ ಪಂಚಾಯಿತಿ ಅವರು ಮನೆಯಲ್ಲಿ ಇರಲು ಬಿಟ್ಟಿದ್ದಾರೆ. ಇದರಿಂದ ಸುತ್ತಮುತ್ತಲಿನ ಜನರು ಭಯದಲ್ಲಿಯೇ ಕಾಲ ಕಳೆಯುವಂತಾಗಿದೆ.

    ಮುಂಬೈ ಪುಣೆಯಿಂದ ಬರುವ ಜನರಿಗೆ ವೈದ್ಯಕೀಯ ಪರೀಕ್ಷೆ ಮಾಡಿ ಅವರ ಗ್ರಾಮದ ಹೊರವಲಯದಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಕ್ವಾರಂಟೈನ್ ಮಾಡಬೇಕು ಎಂದು ಸರ್ಕಾರ ಆದೇಶ ಮಾಡಿದೆ. ಆದರೆ, ಆದೇಶ ಶಿರೂರ ಗ್ರಾಮದಲ್ಲಿ ಪಾಲನೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿಯ ಖೀಳೆಗಾಂವ ಗ್ರಾಮದ ಚೆಕ್‌ಪೋಸ್ಟ್ ನಲ್ಲಿ ಓರ್ವ ಪೊಲೀಸ್ ಪೇದೆಯನ್ನು ಮಾತ್ರ ನಿಯೋಜಿಸಲಾಗಿದೆ. ಗ್ರಾಪಂ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಇಲ್ಲದ ಕಾರಣ ಮಹಾರಾಷ್ಟ್ರದಿಂದ ಬರುವ ಜನರಿಗೆ ಕ್ವಾರಂಟೈನ್‌ನಲ್ಲಿ ಇಡಲು ಸೂಕ್ತ ಕ್ರಮಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿರೂರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪ್ರೇಮಲತಾ ಮಾಳಿ, ಮಹಾರಾಷ್ಟ್ರದಿಂದ ಬಂದವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಗ್ರಾಮದ ಹೊರವಲಯದ ತೋಟದ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗುವುದು. ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಅವರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಖಿಳೇಗಾಂವ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಸಿಬ್ಬಂದಿ ಕೊರತೆ ಕಂಡು ಬಂದರೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಪ್ರಭಾರಿ ಪಿಎಸ್‌ಐ ಎಂ.ಎಸ್. ಪಾಟೀಲ ತಿಳಿಸಿದರು.

    ವೈದ್ಯಕೀಯ ಪರೀಕ್ಷೆ ಮಾಡುವುದು ನಮ್ಮ ಜವಾಬ್ದಾರಿ. ನಂತರ ಅವರನ್ನು ಕ್ವಾರಂಟೈನ್ ಮಾಡುವ ಜವಾಬ್ದಾರಿ ಸ್ಥಳೀಯ ಗ್ರಾಪಂನವರಿಗೆೆ ವಹಿಸಲಾಗಿದೆ.
    | ಎಂ.ಎಸ್. ಕೊಪ್ಪದ ಅಥಣಿ ತಾಲೂಕು ವೈದ್ಯಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts