

ಗ್ವಾಲಿಯರ್: ಲಾಕ್ಡೌನ್ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸದೆ ಹೊರಬೀಳಬೇಡಿ ಎಂದು ಎಷ್ಟು ಹೇಳಿದರೂ ಕೇಳದವರಿಗೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಒಂದು ವಿಭಿನ್ನ ಶಿಕ್ಷೆ ವಿಧಿಸಲಾಗಿದೆ.
ಸ್ಥಳೀಯ ಆಡಳಿತದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಲಾಕ್ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವವರು ಆಸ್ಪತ್ರೆಗಳಲ್ಲಿ ಹಾಗೂ ಪೊಲೀಸ್ ಚೆಕ್ಪೋಸ್ಟ್ ಬಳಿ ಸ್ವಯಂ ಸೇವಕರಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾನ್ಪುರ ಪೊಲೀಸ್ ಹತ್ಯೆ ಪ್ರಕರಣ; ತನಿಖೆ ನಡೆದಷ್ಟೂ ಪೊಲೀಸರೇ ಸಿಕ್ಕಿಬೀಳುತ್ತಿದ್ದಾರೆ…!
ಮಾಸ್ಕ್ ಧರಿಸದೆ ಇರುವುದು ಸೇರಿ ಲಾಕ್ಡೌನ್ನ ಯಾವುದೇ ನಿಯಮಗಳನ್ನು ಉಲ್ಲಂಘಿಸಿದರೂ ಅವರಿಗೆ ದಂಡ ವಿಧಿಸಲಾಗುವುದು. ಹಾಗೇ ಮೂರು ದಿನ ಆಸ್ಪತ್ರೆಯಲ್ಲೋ, ಪೊಲೀಸ್ ಚೆಕ್ಪೋಸ್ಟ್ನಲ್ಲೋ ಕೆಲಸ ಮಾಡಲೇಬೇಕು ಗ್ವಾಲಿಯರ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.
ಹಾಗೇ ಬೇರೆ ರಾಜ್ಯಗಳಿಂದ ಬರುವವರನ್ನು ಗಡಿಯಲ್ಲಿ ಕಡ್ಡಾಯವಾಗಿ ಸ್ಕ್ರೀನ್ ಟೆಸ್ಟ್ಗೆ ಒಳಪಡಿಸಬೇಕು ಎಂದು ಆರೋಗ್ಯ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. (ಏಜೆನ್ಸೀಸ್)