ಇದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ; ರಶ್ಮಿಕಾ ಹೇಳಿಕೆಗೆ ಪ್ರಧಾನಿ ಮೋದಿ ರಿಯಾಕ್ಷನ್ ವೈರಲ್

Rashmika Modi
Published on

ನವದೆಹಲಿ: ನವಿ ಮುಂಬೈನಿಂದ ಮುಂಬೈಗೆ ಸಂಪರ್ಕಿಸುವ ಅಟಲ್​ ಸೇತು ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ ಎಂದು ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ. ಇತ್ತ ಈ ಪೋಸ್ಟ್​ ಪರ-ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ.

ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು, ಈಗ 20 ನಿಮಿಷಗಳಲ್ಲಿ ಪ್ರಯಾಣಿಸಬಹುದು. ಅಸಾಧ್ಯವಾಗಿರೋದನ್ನು ಸಾಧಿಸಿ ತೋರಿಸಿದ್ದಾರೆ. ಗೋವಾದಿಂದ ಮುಂಬೈ, ಬೆಂಗಳೂರಿನಿಂದ ಮುಂಬೈ ರಸ್ತೆ ಹೀಗೆ ಪ್ರಯಾಣಿಸುವುದನ್ನು ಸುಲಭ ಮಾಡಿದ್ದಾರೆ. ಭಾರತ ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ.

ಭಾರತ ಈಗ ವೇಗವಾಗಿ ಸಾಗುತ್ತಿದೆ. ಎಲ್ಲೂ ನಿಲ್ಲುತ್ತಿಲ್ಲ. ಕಳೆದ 10 ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿಯನ್ನು ಸಾಧಿಸಿದೆ. ಪ್ರಗತಿ ಎಂಬುದು ಬಹಳ ವೇಗವಾಗಿ ಆಗುತ್ತಿದೆ. ಈ ಅಟಲ್ ಸೇತು ಕೇವಲ ಏಳು ವರ್ಷಗಳಲ್ಲಿ ಮುಗಿದಿದೆಯಂತೆ. ಹೊಸ ಭಾರತ ಉದಯವಾಗುತ್ತಿದೆ. ಭಾರತ ವಿಶ್ವದ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ. ಭಾರತದ ಯುವಕರು ಜವಾಬ್ದಾರಿಯುತವಾಗಿ ಮತ ಹಾಕಬೇಕು. ನಮ್ಮ ದೇಶ ಸಾಧಿಸುತ್ತಿರುವ ಪ್ರಗತಿ ನಿಲ್ಲಬಾರದು. ಹಾಗಾಗಿ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಬೇಕು ಎಂದು ನಟಿ ರಶ್ಮಿಕಾ ಮಂದಣ್ಣ ಹೇಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net