More

    ಪುರಸಭೆ ಉಪಾಧ್ಯಕ್ಷರ ರಾಜೀನಾಮೆಗೆ ಸೂಚನೆ

    ಸವಣೂರ: ಪುರಸಭೆ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಅವಕಾಶ ಕೋರಿ ಸದಸ್ಯರು ಸಲ್ಲಿಸಿರುವ ಮನವಿ ಆಧರಿಸಿ ಕಾಂಗ್ರೆಸ್ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ. ಉಪಾಧ್ಯಕ್ಷ ಅಲ್ಲಾವುದೀನ್ ಮನಿಯಾರ ಅವರಿಗೆ ಜೂ. 28ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಮಾಜಿ ಸಚಿವ ಬಸವರಾಜ ಶಿವಣ್ಣನವರ ಹೇಳಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಕಾಂಗ್ರೆಸ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

    ಪಟ್ಟಣದ ಪುರಸಭೆಯಲ್ಲಿ ಕಾಂಗ್ರೆಸ್ 15 ಜನ ಸದಸ್ಯರೊಂದಿಗೆ ಬಹುಮತ ಹೊಂದಿದೆ. ಆದರೆ, ಮೀಸಲಾತಿಯಿಂದಾಗಿ ಅಧ್ಯಕ್ಷ ಸ್ಥಾನ ಕೈತಪ್ಪಿದೆ. ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್​ಗೆ ಲಭ್ಯವಾಗಿದೆ. ಇತ್ತೀಚೆಗೆ ಉಪಾಧ್ಯಕ್ಷರು ಸದಸ್ಯರೊಂದಿಗೆ ವಿಶ್ವಾಸದಿಂದ ನಡೆದುಕೊಳ್ಳುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಸದಸ್ಯರು ಅವಿಶ್ವಾಸಕ್ಕೆ ಮುಂದಾಗಿದ್ದಾರೆ. ಅವಿಶ್ವಾಸ ಮಂಡನೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆಯಾಗಲಿದೆ ಎಂದು ಸದಸ್ಯರಿಗೆ ಮನವರಿಕೆ ಮಾಡಲಾಗಿದ್ದು, ಉಪಾಧ್ಯಕ್ಷರು ಹಾಗೂ ಸದಸ್ಯರು ಪಕ್ಷದ ಹಿರಿಯರು ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಸದಸ್ಯರು ಅವಿಶ್ವಾಸ ಮಂಡನೆಯಿಂದ ತಟಸ್ಥರಾಗಲಿದ್ದಾರೆ ಎಂದರು.

    ಪುರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೊಷಣೆಯಾದ ಮೇಲೆ ಪಕ್ಷದ 15 ಸದಸ್ಯರಲ್ಲಿ ಸೂಕ್ತ ಅಭ್ಯರ್ಥಿ ಘೊಷಿಸಲು ತೀರ್ವನಿಸಲಾಗಿದೆ ಎಂದರು.

    ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ಕೆಪಿಸಿಸಿ ಸದಸ್ಯ ಎಸ್.ಎಸ್. ಶಿವಳ್ಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಾದಿಮನಿ, ಜಿಪಂ ಮಾಜಿ ಸದಸ್ಯರಾದ ರಮೇಶ ದುಗ್ಗತ್ತಿ, ಶಿವರಾಜ ಅಮರಾಪುರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಪ್ಪ ತಿಪ್ಪಕ್ಕನವರ, ಉಪಾಧ್ಯಕ್ಷ ಶಿವಕುಮಾರ ಅಡವಿಸ್ವಾಮಿಮಠ, ಪುರಸಭೆ 15 ಸದಸ್ಯರು ಹಾಗೂ ಇತರರು ಇದ್ದರು.

    ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲು?

    ಪುರಸಭೆ ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗುವ ಭಯದಲ್ಲಿ ಕಾಂಗ್ರೆಸ್ ಮುಖಂಡರು ಶನಿವಾರ ತುರ್ತು ಸಭೆ ನಡೆಸಿ, ಪಕ್ಷದ ಸದಸ್ಯರಿಗೆ ಖಡಕ್ ಸೂಚನೆ ನೀಡಲು ನಡೆಸಿದ ಪ್ರಯತ್ನ ವಿಫಲವಾಗಿದೆ. 27 ಸದಸ್ಯರ ಬಲ ಹೊಂದಿರುವ ಪುರಸಭೆಯಲ್ಲಿ ಕೇವಲ 8 ಸದಸ್ಯರನ್ನು ಹೊಂದಿರುವ ಬಿಜೆಪಿ ಈಗಾಗಲೇ ಮೀಸಲಾತಿ ಆಧಾರದಲ್ಲಿ ಅಧ್ಯಕ್ಷ ಸ್ಥಾನ ಪಡೆದುಕೊಂಡಿದೆ. ಜೆಡಿಎಸ್ 2, ಪಕ್ಷೇತರ 2 ಹಾಗೂ ಕಾಂಗ್ರೆಸ್ ಕೆಲ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಸದಸ್ಯರೊಬ್ಬರು ಉಪಾಧ್ಯಕ್ಷ ಸ್ಥಾನ ಅಲಂಕರಿಸುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts