More

    ಪಾಳುಬಿದ್ದ ಕಟ್ಟಡದಲ್ಲಿ ಐಸ್‌ಕ್ರೀಂ ತಯಾರಿಕೆ ಹೈಕೋರ್ಟ್ ನೋಟಿಸ್

    ಬೆಂಗಳೂರು: ನಗರದ ಶೇಷಾದ್ರಿಪುರ ರಾಜಕಾಲುವೆ ಪಕ್ಕದ ಶಿಥಾಲವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಐಸ್ ಕ್ರೀಂ, ವಿವಿಧ ಪಾನೀಯ ತಯಾರಿಕಾ ಘಟಕ ನಡೆಸಲಾಗುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಭಾರತ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ ಹಾಗೂ ಬಿವಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

    ಶುಚಿತ್ವ ಕಾಪಾಡದೆ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಆಹಾರ ತಯಾರಿಕೆ ಘಟಕದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಬೇಕು ಎಂದು ಕೋರಿ ವಕೀಲ ಅಮೃತೇಶ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ. ವಿಚಾರಣೆ ವೇಳೆ, ಪ್ರತಿವಾದಿಗಳ ಪರ ವಕೀಲರು ವಕಾಲತ್ ಸಲ್ಲಿಸಲು ಕಾಲಾವಕಾಶಕ್ಕಾಗಿ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

    ಅರ್ಜಿಯಲ್ಲಿ ಏನಿದೆ?
    ಶೇಷಾದ್ರಿಪುರದ ರಾಜಕಾಲುವೆ ಪಕ್ಕದಲ್ಲಿ ಪಾಳು ಬಿದ್ದ ಕಟ್ಟಡದಲ್ಲಿ ಐಸ್ ಕ್ರೀಂ, ಬಾದಾಮ್ ಹಾಲು ಹಾಗೂ ಇತರ ಪಾನೀಯ ತಯಾರಿಸಿ ರಸ್ತೆಬದಿಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ತ್ಯಾಜ್ಯವನ್ನು ಎಸೆಯುವ ಸ್ಥಳದ ನಡುವೆ ಆಹಾರ ಸಿದ್ಧಪಡಿಸಲಾಗುತ್ತಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾನದಂಡಗಳನ್ನು ಅನುಸರಿಸುತ್ತಿಲ್ಲ. ಸ್ವಲ್ಪವೂ ಶುಚಿತ್ವ ಕಾಪಾಡದೆ ಅನಧಿಕೃತವಾಗಿ ನಡೆಸಲಾಗುತ್ತಿದೆ. ಈ ಎಲ್ಲ ವಿಚಾರಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ 6 ತಿಂಗಳಿಂದ ಪದೇಪದೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts