ಯತ್ನಾಳ್​ಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್

ಬಸನಗೌಡ ಪಾಟೀಲ್ ಯತ್ನಾಳ್
Published on

ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರ ನಡುವೆ ಸಾಕಷ್ಟು ಟೀಕೆ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರವನ್ನೂ ತಂದಿತ್ತು.

ಇದೀಗ ಮುರುಗೇಶ್ ನಿರಾಣಿ ಸೇರಿದಂತೆ ಮುಖ್ಯಮಂತ್ರಿ, ಸಚಿವರು ಸೇರಿದಂತೆ ಪಕ್ಷದ ಹಿರಿಯ ನಾಯಕರ ವಿರುದ್ಧ ಸಾರ್ವಜನಿಕವಾಗಿ ಮುಜುಗರ ತರುವಂತಹ ಟೀಕೆ ಮಾಡುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಕೇಂದ್ರ ಶಿಸ್ತು ಸಮಿತಿ ಕಾರಣ ಕೇಳಿ ನೋಟಿಸ್ ನೀಡಿದೆ.

ಯತ್ನಾಳ್ ಸ್ವಪಕ್ಷ ನಾಯಕರ ವಿರುದ್ಧವೇ ಸಾರ್ವಜನಿಕವಾಗಿ ನೀಡಿರುವ ಹೇಳಿಕೆ ವಿಪಕ್ಷಗಳ ಟೀಕೆಗೂ ಕಾರಣವಾಗಿತ್ತು. ಯತ್ನಾಳ್ ನಡೆ ಬಿಜೆಪಿ ಹೈಕಮಾಂಡ್​​ಗೂ ಮುಜುಗರ ತಂದಿತ್ತು ಎನ್ನಲಾಗಿದೆ. ಹೀಗಾಗಿ ಬಸನಗೌಡ ಪಾಟೀಲ್ ಅವರಲ್ಲಿ ಕಾರಣ ಕೇಳಿ, ನೋಟಿಸ್ ಕಳುಹಿಸಲಾಗಿದೆ ಎನ್ನಲಾಗಿದೆ.

ಫ್ಯಾಕ್ಸ್​ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ನೋಟಿಸ್ ತಲುಪಿಸಿದ್ದು, 15 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಲಾಗಿದೆ. ರಾಜ್ಯದ ಶಿಸ್ತು ಸಮಿತಿಯಿಂದ ಮೂರು ದಿನಗಳ ಹಿಂದೆ ಬಸನಗೌಡ ಪಾಟೀಲ್ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net