ತ್ವರಿತವಾಗಿ ಪರಿಹಾರ ವಿತರಿಸಲು ಸೂಚನೆ

blank

ಬೆಳಗಾವಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆಯಂದಾಗಿ ಹಾನಿಗೊಳಗಾದ ಮನೆಗಳಿಗೆ ಪರಿಹಾರ ವಿತರಣೆ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ನಿಗಾ ವಹಿಸಬೇಕು. ಜತೆಗೆ ಜನ-ಜಾನುವಾರುಗಳ ಪ್ರಾಣ ಹಾನಿಗೆ ಸಂಬಧಿಸಿದಂತೆ ತ್ವರಿತ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಫುಲ್ ಬನ್ಸಲ್ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅತೀವೃಷ್ಟಿಯಿಂದಾಗಿ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ವಿತರಣೆಗೆ ಸಂಬಂಧಿಸಿದ ಇಲಾಖೆಗಳು ಜಂಟಿ ಸಮೀಕ್ಷೆ ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿ ಗ್ರಾಪಂ ಗಳಲ್ಲಿ ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಬೇಕು. ಗ್ರಾಮ ಸಭೆಗಳ ಬೇಡಿಕೆ ಅನುಸಾರ ತಯಾರಿಸಲಾದ ಕ್ರಿಯಾ ಯೋಜನೆಗಳನ್ನು ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಪೂರ್ಣಗೊಳಿಸಿ ಅನುದಾನ ವ್ಯರ್ಥವಾಗದಂತೆ ನಿಗಾ ವಹಿಸಲು ತಿಳಿಸಿದರು. ಜಿಪಂ ವ್ಯಾಪ್ತಿಯ ವಿವಿಧ ವಸತಿ ಯೋಜನೆಗಳಡಿ ನಿಗದಿ ಪಡಿಸಿದ ಗುರಿ ಸಾಧಿಸಬೇಕು. ಅಲ್ಲದೇ ಈಗಾಗಲೇ ಬಾಕಿ ಇರುವ ಮನೆಗಳ ನಿರ್ಮಾಣ ಕಾರ್ಯ ತ್ವರಿತವಾಗಿ ಪ್ರಾರಂಭಿಸಬೇಕು ಎಂದರು.
ಪ್ರಸಕ್ತ ಸಾಲಿನ ಚಳಿಗಾಲ ಅಧಿವೇಶನ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಉತ್ಸವದ ಮಾಹಿತಿ ಪಡೆದ ಅವರು ಸದರಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸಭೆ ನಿರ್ವಹಿಸಿದರು. ಐಎಎಸ್ ಪ್ರೊಬೇಷನರಿ ಅಧಿಕಾರಿ ದಿನೇಶಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೋನಕೇರಿ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ನಗರಾಭಿವೃದ್ದಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಜಿಪಂ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಿಟರ, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ರಾಜೀವ ಕೂಲೇರ, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಇತರರಿದ್ದರು.
Share This Article

ಮೊಬೈಲ್​ ಹಿಡಿದುಕೊಳ್ಳುವ ಸ್ಟೈಲ್​ ನೋಡಿಯೇ ನಿಮ್ಮ ವ್ಯಕ್ತಿತ್ವ ಎಂಥದ್ದು ಅಂತ ಹೇಳಬಹುದು! ಇಲ್ಲಿದೆ ಅಚ್ಚರಿ ಸಂಗತಿ… Personality Facts

Personality Facts : ಸೈಕಾಲಜಿ ಪ್ರಕಾರ ಒಬ್ಬರ ಕ್ರಿಯೆಗಳ ಆಧಾರದ ಮೇಲೆ ಅವರ ವ್ಯಕ್ತಿತ್ವವನ್ನು ನಿರ್ಣಯಿಸಬಹುದು.…

ಬಿಸಿ..ಬಿಸಿ ಚಹಾ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಇಂದೇ ಬಿಟ್ಟು ಬಿಡಿ.. ಹಲ್ಲುಗಳಿಗೆ ಎಷ್ಟು ಹಾನಿಕಾರಕ ಗೊತ್ತಾ? Health Tips

Health Tips: ಬಿಸಿ..ಬಿಸಿ ಚಹಾ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ...ಊಟ ಇಲ್ಲದಿದ್ದರೂ, ತಡವಾದರೂ ಒಂದು…

honeymoon destinations : 2024 ರಲ್ಲಿ ನವವಿವಾಹಿತರನ್ನು ಆಕರ್ಷಿಸಿದ ನೆಚ್ಚಿನ ಹನಿಮೂನ್ ತಾಣಗಳು ಇವು..!

 honeymoon destinations  : ವ್ಯಕ್ತಿಯ ಆದ್ಯತೆಗಳು ಮತ್ತು ಆಯ್ಕೆಗಳು ವರ್ಷಗಳಲ್ಲಿ ಬದಲಾಗುತ್ತವೆ. ಈಗ ನಾವು 2024…