ಒತ್ತುವರಿ ತೆರವು ನಿಲ್ಲಿಸಲು ಸೂಚನೆ

11klr3- k.y.najegowda
Published on

ಕೋಲಾರ: ಜಂಟಿ ಸೆರ್ವೇ ಮುಗಿಯುವ ತನಕ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ತಂಟೆಗೆ ಬಾರದಂತೆ ಸಿಎಂ ಹಾಗೂ ಅರಣ್ಯ ಸಚಿವರು ಸೂಚನೆ ನೀಡಿದ್ದು, ರೈತರು ಧೈರ್ಯದಿಂದ ಇರಬೇಕು ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಇಲಾಖಾಽಕಾರಿಗಳು ವಿನಾಕಾರಣ ರೈತರಿಗೆ ತೊಂದರೆ ನೀಡುತ್ತಿದ್ದಾರೆ. ಆ ಮೂಲಕ ಬಹಳ ಹೇಯ ಕೃತ್ಯ ವೆಸಗಿದ್ದು, ರೈತರು ತೀವ್ರ ತೊಂದರೆ ಒಳಗಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ರೈತರು ಯಾರು ಅಕ್ರಮವಾಗಿ ಜಮೀನುಗಳಲ್ಲಿ ಇಲ್ಲ, ಸುಮಾರು 40-50 ವರ್ಷಗಳಿಂದ ಸಾಗುವಳಿ ಮಾಡಿಕೊಂಡು, ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಆದರೂ ಸಹ ಅರಣ್ಯ ಇಲಾಖೆ ಅಧಿಕಾರಿಗಳು ದಬ್ಬಾಳಿಕೆ, ದೌರ್ಜನ್ಯದಿಂದ ಬೆಳೆ ಹಾನಿ ಮಾಡಿ ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಿಎಂ ಗಮನಕ್ಕೆ ತಂದಾಗ ಯಾವುದೇ ಕಾರಣಕ್ಕೂ ತೊಂದರೆ ಕೊಡಕ್ಕೆ ಹೋಗಬಾರದು ಎಂದು ಅಽಕಾರಿಗಳಿಗೆ ಸೂಚಿಸಿದ್ದಾರೆ ಎಂದರು.
ಈ ವಿಚಾರವನ್ನು ಬಂಗಾರಪೇಟೆ ಎಸ್.ಎನ್.ನಾರಾಯಣಸ್ವಾಮಿ, ಕೊತ್ತೂರು ಜಿ.ಮಂಜುನಾಥ್ ಹಾಗೂ ನಾನು ಗಂಭೀರವಾಗಿ ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಇಲಾಖೆ ಸಚಿವರನ್ನು ಭೇಟಿ ಮಾಡಿ ರೈತರು ಅನುಭವಿಸುತ್ತಿರುವ ತೊಂದರೆ ಬಗ್ಗೆ ಗಮನಕ್ಕೆ ತರಲಾಗಿದೆ. ನಿಮ್ಮೊಟ್ಟಿಗೆ ಜಿಲ್ಲೆಯ ಜನಪ್ರತಿನಿಧಿಗಳು, ಸರ್ಕಾರ ಇದೆ, ಯಾವುದೇ ಕಾರಣಕ್ಕೂ ಆತಂಕಪಡುವುದು ಬೇಡ ಎಂದು ಧೈರ್ಯ ಹೇಳಿದ್ದಾರೆ.
ಅರಣ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ಮುಗಿಯುವ ತನಕ ತೆರವು ಮಾಡಬಾರದು ತಿಳಿಸಲಾಗಿದೆ. ಶ್ರೀನಿವಾಸಪುದಲ್ಲಿ ಸಾಕಷ್ಟು ತೊಂದರೆ ಕೊಟ್ಟರು, ಈಗ ಕೋಲಾರದಲ್ಲಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಕೆಜಿಎಫ್, ಮಾಲೂರು, ಮುಳಬಾಗಿಲು ತಾಲೂಕುಗಳಿಗೆ ಬರಲಿದ್ದಾರೆ. 3 ಎಕರೆ ಒಳಪಟ್ಟ ಒತ್ತುವರಿ ತೆರವುಗೊಳಿಸಬಾರದು ಎಂದು ಸರ್ಕಾರದ ಆದೇಶ ಇದ್ದು, ಅಧಿಕಾರಿಗಳು ಉಲ್ಲಂಘನೆ ಮಾಡಿದ್ದಾರೆ ಎಂದು ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net