ಮದ್ಯಪಾನ ಮಾಡಿ ಸಿಬ್ಬಂದಿ ನಿಂದಿಸಿದ ಅಧಿಕಾರಿಗೆ ನೋಟಿಸ್

Oplus_0
ಸಂತೋಷ್‌ಕುಮಾರ್
Published on

ಯಳಂದೂರು: ಸಮಾಜ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕರೊಬ್ಬರು ಕುಡಿದು ಕಚೇರಿಗೆ ಬಂದು ಅವಾಚ್ಯ ಶಬ್ದಗಳಿಂದ ಸಿಬ್ಬಂದಿಯನ್ನು ನಿಂದಿಸಿದ್ದರಿಂದ ಇಲಾಖೆಯ ಉಪ ನಿರ್ದೇಶಕರು ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕ ಸಂತೋಷ್‌ಕುಮಾರ್ ಶುಕ್ರವಾರ ಕಚೇರಿ ವೇಳೆ ಕುಡಿದು ಬಂದು ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮೇ 6 ರಂದು ಕಚೇರಿ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು ಬಂದು ಅವಾಚ್ಯ ಶಬ್ದಗಳಿಂದ ಇಲ್ಲಿನ ಸಿಬ್ಬಂದಿಯನ್ನು ನಿಂದಿಸಿದ್ದರು. ಈ ಬಗ್ಗೆ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಅವರಿಗೆ ದೂರು ಸಲ್ಲಿಸಲಾಗಿತ್ತು. ಈ ಸಂಬಂಧ ರಾಜೇಶ್ ಅವರು ಸಂತೋಷ್‌ಕುಮಾರ್‌ಗೆ ಎಚ್ಚರಿಕೆ ನೀಡಿ, ಉಪ ನಿರ್ದೇಶಕ ಮಲ್ಲಿಕಾರ್ಜುನ್ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಉಪನಿರ್ದೇಶಕರು ನೋಟಿಸ್ ಜಾರಿ ಮಾಡಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯನ್ನು ಉಲ್ಲಂಘನೆ ಮಾಡಿ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು ನಿಮ್ಮ ಮೇಲೆ ಶಿಸ್ತು ಕ್ರಮ ಜಗುಗಿಸಲು ಇಲಾಖೆಯ ಆಯುಕ್ತರಿಗೆ ಶಿಫಾರಸ್ಸು ಮಾಡಲಾಗುವುದು. ಕೂಡಲೇ ನೀವು ಬಂದು ಲಿಖಿತವಾಗಿ ಈ ಬಗ್ಗೆ ಸಮಜಾಯಷಿ ನೀಡಬೇಕು ಎಂದು ಎಚ್ಚರಿಕೆ ನೋಟಿಸ್ ಜಾರಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net