Wednesday, 12th December 2018  

Vijayavani

ಟ್ರಿನಿಟಿ ಸರ್ಕಲ್​​​ ಬಳಿ ಬಿರುಕು ಬಿಟ್ಟ ಪಿಲ್ಲರ್ - 10 ಕಿಮೀ ವೇಗದಲ್ಲಿ ಮೆಟ್ರೋ ಓಡಾಟ - ಸಮಸ್ಯೆ ಬಗೆಹರಿಸೋದಾಗಿ ಹೇಳಿದ ಸಿಎಂ        ಸದನದ ಹೊರಗೆ NPS ಆದೇಶ ಹಿನ್ನೆಲೆ - ಸಿಎಂ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ಸಿದ್ದತೆ -  ಸಂಕಷ್ಟ ತಂದ ಪೆನ್ಶನ್‌ ಸ್ಕೀಂ        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು -  ರಾಜ್ಯಪಾಲರನ್ನು ಭೇಟಿಯಾಗಿ ಕಾಂಗ್ರೆಸ್ ಹಕ್ಕು ಮಂಡನೆ        ನಾಳೆ ಕೆಸಿಆರ್ ಪಟ್ಟಾಭಿಷೇಕ- ಪ್ರಮಾಣವಚನಕ್ಕೆ ಚಂದ್ರಶೇಖರ್ ರಾವ್ ಸಿದ್ಧತೆ - ರಾಜ್ಯಪಾಲರನ್ನು ಭೇಟಿಯಾದ ನಾಯಕ        ಶ್ರೀರಂಗಪಟ್ಟಣದಲ್ಲಿ ಶೂಟಿಂಗ್ ವೇಳೆ ಅವಾಂತರ - ಭರತ ಬಾಹುಬಲಿ ತಂಡದ ಮೇಲೆ ಹೆಜ್ಜೇನು ದಾಳಿ -ಏಳು ಮಂದಿ ಆಸ್ಪತ್ರೆಗೆ       
Breaking News

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೇಲುಕೈ ಸಾಧಿಸಲು ಸೂಚನೆ

Friday, 10.08.2018, 3:02 AM       No Comments

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಶುಕ್ರವಾರ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಕಾಂಗ್ರೆಸ್​ನಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದರೂ ಈ ಚುನಾವಣೆಯಲ್ಲಿ ಯಾವುದೇ ರಿಯಾಯಿತಿ ನೀಡದೇ ಕ್ಷೇತ್ರ ಗೆಲ್ಲುವಂತೆ ಕೆಪಿಸಿಸಿ ಎಲ್ಲ ಜಿಲ್ಲೆಗಳಿಗೆ ಪರೋಕ್ಷ ಸಂದೇಶ ಕಳುಹಿಸಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಅನಿವಾರ್ಯ ಸಂದರ್ಭ, ಪಕ್ಷದ ಬೆಳವಣಿಗೆಗೆ ಸ್ಥಳೀಯ ಸಂಸ್ಥೆ ಗೆಲ್ಲುವುದು ಅನಿವಾರ್ಯ. ಈ ಚುನಾವಣೆಯಲ್ಲಿ ಮೈ ಮರೆತರೆ ಜೆಡಿಎಸ್ ಚಿಗುರಿಕೊಳ್ಳಲು ಅವಕಾಶ ಸಿಕ್ಕಂತೆ. ಆ ಕಾರಣಕ್ಕೆ ಮೈ ಮರೆಯದೇ ಚುನಾವಣೆ ಎದುರಿಸಿ ಹೆಚ್ಚು ಸ್ಥಾನ ಗೆಲ್ಲಿ ಎಂದು ಪಕ್ಷದ ಜಿಲ್ಲಾ ಘಟಕಗಳಿಗೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಮುಖರ ಸಮಿತಿ ರಚಿಸಿ, ಅರ್ಹರಿಗೆ ಟಿಕೆಟ್ ವಿತರಿಸಲು ಪಕ್ಷ ತೀರ್ವನಿಸಿದೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಇಲ್ಲ. ಮೈತ್ರಿ ವಿಚಾರ ಜಿಲ್ಲಾ ಮಟ್ಟದ ನಾಯಕರಿಗೆ ಬಿಟ್ಟಿದ್ದು. ಬಿಜೆಪಿ ವಿರುದ್ಧ ಕಾಂಗ್ರೆಸ್ ಜಿದ್ದಾಜಿದ್ದಿನ ಹೋರಾಟ ನಡೆಸಲಿದೆ. ಜೆಡಿಎಸ್ ಜತೆ ಸ್ನೇಹದ ಹೋರಾಟ ಮುಂದುವರಿಯಲಿದೆ.

| ಸಿದ್ದರಾಮಯ್ಯ ಮಾಜಿ ಸಿಎಂ

Leave a Reply

Your email address will not be published. Required fields are marked *

Back To Top