More

    ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಮೌಲ್ಯಮಾಪನ ಸಿಬ್ಬಂದಿಗೆ ಚುನಾವಣಾ ಕಾರ್ಯದಿಂದ ವಿನಾಯಿತಿಗೆ ಸೂಚನೆ

    ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಶಿಕ್ಷಕರಿಗೆ ಲೋಕಸಭೆ ಚುನಾವಣೆ ಕಾರ್ಯದಿಂದ ವಿನಾಯಿತಿ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಈ ಸಂಬಂಧ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್ ಸಿಂಗ್ ಅವರು ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

    ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರು ಮತ್ತು ಶಿಕ್ಷಕರನ್ನು ಚುನಾವಣೆ ಕಾರ್ಯಗಳಿಗೆ ನಿಯೋಜನೆ ಮಾಡಿಕೊಳ್ಳಲಾಗುತ್ತಿದೆ. ಆದರೆ, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತಲಾ 3 ಪರೀಕ್ಷೆಗಳನ್ನು ನಡೆಸಬೇಕಾಗಿದೆ.

    ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಅಂತಿಮ ಹಂತದಲ್ಲಿವೆ. ಇದರ ಹಿಂದೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಲಿವೆ. ನಂತರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ತ್ವರಿತವಾಗಿ ಅಂತಿಮಗೊಳಿಸಿ ಲಿತಾಂಶ ಪ್ರಕಟಿಸಬೇಕಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಯನ್ನು ಮೌಲ್ಯಮಾಪನ ಕಾರ್ಯ ಮುಗಿಯುವವರೆಗೂ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡಿ ನಂತರ ಚುನಾವಣಾ ಕಾರ್ಯಕ್ಕೆ ನಿಯೋಜಿಸಿಕೊಳ್ಳುವಂತೆ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts