

ಗುರುಪುರ: ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಜರುಗಿದ ಸ್ಥಳೀಯಾಡಳಿತ ಸಂಭ್ರಮ ‘ಹೊಂಬೆಳಕು-2025’ರಲ್ಲಿ ನೀರುಮಾರ್ಗ ಗ್ರಾ.ಪಂ. 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅತಿ ಹೆಚ್ಚು ಮಾನವ ದಿನ ಸೃಜನೆಗಾಗಿ ತಾಲೂಕುಮಟ್ಟದ ಅತ್ಯುತ್ತಮ ಪ್ರಶಸ್ತಿ ಪಡೆಯಿತು.
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಪೌರಾಡಳಿತ ಸಚಿವ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್, ತಾಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಉಪಸ್ಥಿತಿಯಲ್ಲಿ ನೀರುಮಾರ್ಗ ಗ್ರಾ.ಪಂ. ಅಧ್ಯಕ್ಷ ಶ್ರೀಧರ್, ಉಪಾಧ್ಯಕ್ಷೆ ಮೋಲಿ ಶಾಂತಿ ಸಲ್ಡಾನ, ಪಿಡಿಒ ಅಬೂಬಕ್ಕರ್ ಪ್ರಶಸ್ತಿ ಸ್ವೀಕರಿಸಿದರು. ನೀರುಮಾರ್ಗ ಪಂಚಾಯಿತಿ ಲೆಕ್ಕ ಸಹಾಯಕ ಉಮಾನಾಥ, ಸಿಬ್ಬಂದಿ ಸುರೇಖಾ, ಪ್ರಶಾಂತಿ, ಸವಿತಾ, ಯಶೋದಾ, ಸಂದೇಶ್, ಯಮುನಾ ಉಪಸ್ಥಿತರಿದ್ದರು.