More

     ದೂರುಗಳು ಬಾರದಂತೆ ನರೇಗಾ ಸಮರ್ಪಕ ಅನುಷ್ಠಾನಕ್ಕೆ ಒತ್ತು ನೀಡಿ

    ಕೊಪ್ಪಳ: ಉದ್ಯೋಗ ಅರಸಿ ಬರುವವರಿಗೆ ಕೆಲಸ ನೀಡುತ್ತಿಲ್ಲವೆಂಬ ಯಾವುದೇ ದೂರುಗಳು ಬಾರದಂತೆ ಜಿಲ್ಲೆಯ ಪ್ರತಿ ಹಳ್ಳಿಯಲ್ಲಿ ನರೇಗಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಹೇಳಿದರು.

    ವೈಯಕ್ತಿಕ ಬದಲಾಗಿ ಸಾಮೂಹಿಕ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ

    ನಗರದ ಜಿಲ್ಲಾಡಳಿತ ಭವನದ ಕೆ-ಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೇಸಿಗೆಯೊಳಗೆ ಇಂಗುಗುಂಡಿ ನಿರ್ಮಾಣ, ಕೆರೆ ಹೂಳೆತ್ತುವ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ವೈಯಕ್ತಿಕ ಬದಲಾಗಿ ಸಾಮೂಹಿಕ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ಕೊಡಬೇಕು.

    ಬೇಸಿಗೆ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸದಲ್ಲಿ ಶೇ.30 ರಿಯಾಯಿತಿ ಇದ್ದು, ಸದುಪಯೋಗ ಪಡೆದುಕೊಳ್ಳಬೇಕು. ಹಿಂದಿನ ಚುನಾವಣೆಯಲ್ಲಿ ಕಡಿಮೆ ಮತದಾನ ನಡೆದ ಗ್ರಾಮಗಳಲ್ಲಿಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

    ಇದನ್ನೂ ಓದಿ: ಜಲಜೀವನ್ ಮಿಷನ್‌ಗೆ 885 ಕೋಟಿ ರೂ ಅನುಮೋದನೆ: ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಮಾಹಿತಿ

    ಜಲಜೀವನ್ ಮಿಷನ್ ಮತ್ತು ಡಿಬಿಒಟಿ ದುರಸ್ತಿ ಸರಿಪಡಿಸಿ

    ಜಲಜೀವನ್ ಮಿಷನ್ ಮತ್ತು ಡಿಬಿಒಟಿ ದುರಸ್ತಿಗೆ ಬಂದಿದ್ದಲ್ಲಿ ತಕ್ಷಣ ಸರಿಪಡಿಸಿ ಜನರಿಗೆ ಸಮರ್ಪಕವಾಗಿ ಕುಡಿವ ನೀರು ಪೂರೈಕೆ ಮಾಡಬೇಕು. ಬೇಸಿಗೆಯಲ್ಲಿ ಜಿಲ್ಲೆಯ ಯಾವುದೇ ಹಳ್ಳಿಗಳಲ್ಲಿ ಜನ-ಜಾನುವಾರುಗಳಿಗೆ ಕುಡಿವ ನೀರು ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು.

    ಅಗತ್ಯವಿದ್ದಲ್ಲಿ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ಪೂರೈಸಬೇಕು. ಜಲ ಸಮಸ್ಯೆ ಕಂಡುಬಂದಲ್ಲಿ 24 ಗಂಟೆಯೊಳಗೆ ಸರಿಪಡಿಸಬೇಕು. ದನಗಳಿಗೆ ಮೇವು ಅಭಾವವಾಗದಂತೆ ಎಚ್ಚರಿಕೆವಹಿಸಬೇಕು ಎಂದು ನಿರ್ದೇಶನ ನೀಡಿದರು.


    ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts