More

    ಎನ್‌ಆರ್‌ಐ ಮತದಾರರ ಸೆಳೆಯಲು ಜಿಲ್ಲಾ ಸ್ವೀಪ್ ಸಮಿತಿ ವಿನೂತನ ಪ್ರಯತ್ನ

    ಉಡುಪಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡಿರುವ ಅವಿಭಜಿತ ದ.ಕ. ಜಿಲ್ಲೆಯ ಸಾವಿರಾರು ಮಂದಿ ಉದ್ಯೋಗ, ವಿದ್ಯಾಭ್ಯಾಸ ಮತ್ತಿತರ ಕಾರಣಗಳಿಂದ ಗಲ್ಫ್ ರಾಷ್ಟ್ರಗಳು, ಅಮೇರಿಕಾ, ಬ್ರಿಟನ್, ಅಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ವಾಸಿಸುತ್ತಿದ್ದು, ಚುನಾವಣೆ ದಿನ ಊರಿಗೆ ಆಗಮಿಸಿ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮನವೊಲಿಸಲು ಜಿಲ್ಲಾ ಸ್ವೀಪ್ ಸಮಿತಿ ಮುಂದಾಗಿದೆ.

    ಪ್ರಸ್ತುತ ಸಾಮಾಜಿಕ ಮಾಧ್ಯಮಗಳ ಮೂಲಕ ಎಷ್ಟೇ ದೂರದಲ್ಲಿದ್ದರೂ ಸುಲಭವಾಗಿ ಸಂಪರ್ಕಿಸಲು ಸಾಧ್ಯವಿದೆ. ಸ್ವೀಪ್ ಸಮಿತಿಯಿಂದ ಹೊರದೇಶ ಮತ್ತು ಹೊರ ರಾಜ್ಯದಲ್ಲಿರುವ ಜಿಲ್ಲೆಯ ವಿವಿಧ ಸಂಘಟನೆಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳನ್ನು ಝೂಮ್, ಯು ಟೂಬ್ ಮೂಲಕ ಸಂಪರ್ಕಿಸಲಾಗುತ್ತಿದೆ.
    ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಮತದಾರರಿಗೆ ಜಾಗೃತಿ ಮತ್ತು ಮತದಾನದ ಮಹತ್ವ ಕುರಿತು ಅರಿವು ಮೂಡಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿ ಕಳೆದ ಬಾರಿಗಿಂತ ಹೆಚ್ಚಿನ ಮತದಾನ ನಡೆಸಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೇ ಮೊದಲ ಬಾರಿಗೆ ವಿದೇಶದಲ್ಲಿ ಮತ್ತು ಹೊರರಾಜ್ಯದಲ್ಲಿ ನೆಲೆಸಿರುವ ಜಿಲ್ಲೆಯ ಮತದಾರರನ್ನು ಮತಗಟ್ಟೆಗೆ ಬರುವಂತೆ ಮಾಡಲು ವಿನೂತನ ಪ್ರಯತ್ನ ಮಾಡುತ್ತಿದೆ.

    ಪತ್ರ ಮೂಲಕ ಕೋರಿಕೆ
    ವಿದೇಶದಲ್ಲಿರುವ ಜಿಲ್ಲೆಯ ನಾಗರೀಕರನ್ನು ಮತದಾನಕ್ಕೆ ಕರೆತರಲು ಪೋಷಕರು ಮತ್ತು ಅಪ್ತರ ಮೂಲಕ ಮತದಾನ ದಿನವಾದ ಮೇ 10 ರಂದು ಮನೆಗೆ ಆಗಮಿಸುವಂತೆ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಪೋಷಕರು, ಮಕ್ಕಳಿಗೆ ಪತ್ರ ಬರೆಯುವಂತೆ ಪ್ರೇರೇಪಿಸಲಾಗುತ್ತಿದೆ. ಈ ಪತ್ರದಲ್ಲಿ ತಾವು ಓದಿದ ಶಾಲೆಯ ಕಟ್ಟಡಗಳು ಸಾಂಪ್ರಾದಾಯಿಕ ಚಿತ್ರಗಳ ವಿನ್ಯಾಸದೊಂದಿಗೆ ಆಕರ್ಷಕವಾಗಿ ಶೃಂಗಾರಗೊಂಡಿರುವ ಬಗ್ಗೆ, ಮತದಾನದ ನೆಪದಲ್ಲಿ ಸ್ನೇಹಿತರನ್ನು , ಬಂಧುಗಳನ್ನು ಭೇಟಿ ಮಾಡಲು ಸಿಗುವ ಅವಕಾಶದಂತೆ ಪರಿಗಣಿಸಲು ಕೋರಲಾಗುತ್ತಿದೆ.

    ಜಿಲ್ಲೆಯ ಸಾವಿರಾರು ಮಂದಿ ವಿದೇಶ ಮತ್ತು ಹೊರರಾಜ್ಯದಲ್ಲಿ ನಲೆಸಿದ್ದು, ಜಿಲ್ಲೆಯೊಂದಿಗೆ ಎಲ್ಲಾ ರೀತಿಯ ಭಾವನಾತ್ಮಕ ಸಂಬಂಧಗಳನ್ನು ಹೊಂದಿದ್ದಾರೆ. ಜಿಲ್ಲೆಯ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಉತ್ತಮ ನಾಯಕನನ್ನು ಆಯ್ಕೆ ಮಾಡುವ ಅತ್ಯಂತ ಮಹತ್ವದ ಘಟ್ಟವಾದ ಮತದಾನ ಪ್ರಕ್ರಿಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕು. ಇದಕ್ಕಾಗಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಅವರನ್ನು ಸಂಪರ್ಕಿಸಲಾಗುತ್ತಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಸಿಇಒ ಪ್ರಸನ್ನ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts