More

    ಲೇಖಕಿ ವೈದೇಹಿ ಅವರಿಗೆ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’

    ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ ನೀಡಲಿರುವ 2022ನೆಯ ಸಾಲಿನ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ’ ಪ್ರಕಟಿಸಲಾಗಿದ್ದು, ಹಿರಿಯ ಲೇಖಕಿ ವೈದೇಹಿ ‘ನೃಪತುಂಗ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.

    ಪ್ರಶಸ್ತಿಯು ಏಳು ಲಕ್ಷ ರೂ. ನಗದು ಹಾಗೂ ಪ್ರಮಾಣಪತ್ರ ಮತ್ತು ಲತಾಂಬೂಲ ಒಳಗೊಂಡಿದ್ದು, ಜ್ಞಾನಪೀಠ ಪ್ರಶಸ್ತಿಗೆ ಸರಿಸಮಾನವಾದ ಈ ಪ್ರಶಸ್ತಿಯನ್ನು ಬರಹಗಾರರು ಕನ್ನಡ ಸಾಹಿತ್ಯಕ್ಕೆ ಕೊಟ್ಟಿರುವ ಸಮಗ್ರ ಕೊಡುಗೆಯನ್ನು ಪರಿಗಣಿಸುವ ನೀಡಲಾಗುತ್ತದೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಷಿ ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳಾ ಕೃಷಿ ಕಾರ್ಮಿಕರಿಗೆ 1000 ರೂ. ಸಹಾಯಧನ; ಬಜೆಟ್​ನಲ್ಲಿ ಘೋಷಿಸಿದ್ದ ಯೋಜನೆ ತಿದ್ದುಪಡಿ ಮಾಡಿದ ಸಿಎಂ

    ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಉಡುಪಿಯವರಾದ ಜಾನಕಿ ಶ್ರೀನಿವಾಸಮೂರ್ತಿ ಅವರು ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರಾಗಿದ್ದು, ಸಣ್ಣಕತೆ, ಕಾವ್ಯ, ಕಾದಂಬರಿ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಸೇರಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಹುಲುಸಾದ ಕೃಷಿ ಮಾಡಿದ್ದಾರೆ. ಇವರ ಜೀವಮಾನದ ಸಾಧನೆಯನ್ನು ಪರಿಗಣಿಸಿ ಈ ಮೌಲಿಕ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

    ‘ಮಯೂರವರ್ಮ ಪ್ರಶಸ್ತಿ’

    ಇದೇ ವೇಳೆ ‘ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ’ಗೆ ಪುರಸ್ಕೃತರ ಹೆಸರನ್ನು ಪ್ರಕಟಿಸಿದ್ದು, ಗದಗ ಜಿಲ್ಲೆಯ ಗಜೇಂದ್ರಗಡದ ಹನುಮಂತ ಸೋಮನಕಟ್ಟಿ, ವಿಜಯನಗರ ಜಿಲ್ಲೆಯ ಕೊಟ್ಟೂರಿನ ಗುಡ್ಡಪ್ಪ ಬೆಟಗೇರಿ, ತುಮಕೂರು ಜಿಲ್ಲೆಯ ಡಾ. ಸತ್ಯಮಂಗಲ ಮಹಾದೇವ, ಗಡಿಭಾಗ ಕಾಸರಗೋಡಿನ ವಿದ್ಯಾರಶ್ಮಿ ಪೆಲ್ಲತಡ್ಕ ಹಾಗೂ ಹಾಸನದ ಬೇಲೂರು ರಘುನಂದನ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ತಲಾ 25,001 ರೂ. ಹಾಗೂ ಪ್ರಮಾಣಪತ್ರ ಮತ್ತು ಲತಾಂಬೂಲ ಒಳಗೊಂಡಿದೆ. ಇದನ್ನೂ ಓದಿ: ಉಡುಪಿಯಲ್ಲಿ ಮಾದಕ ದ್ರವ್ಯ ಸೇವಿಸುತ್ತಿದ್ದ 42 ವಿದ್ಯಾರ್ಥಿಗಳು ಅಮಾನತು; ಎಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ಕ್ರಮ

    ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ. ಡಾ. ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದ್ದು, ಚಿಂತಕ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್, ಹಿರಿಯ ಸಾಹಿತಿ ಡಾ. ಎಸ್.ಆರ್. ಲೀಲಾ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಸತೀಶ್, ಕ.ರಾ.ರ.ಸಾ.ಸಂಸ್ಥೆಯ ಕನ್ನಡ ಕ್ರಿಯಾ ಸಂಸ್ಥೆಯ ರಾಜ್ಯಾಧ್ಯಕ್ಷ ವ.ಚ.ಚನ್ನೇಗೌಡ ಸಭೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts