ಎನ್‌ಎಸ್‌ಎಸ್ ವಾರ್ಷಿಕ ಶಿಬಿರ

ಚಿಕ್ಕೋಡಿ: ಯುವ ಜನಾಂಗ ಮೊಬೈಲ್‌ನಲ್ಲಿ ತಲ್ಲೀನರಾಗದೇ ಅಮೂಲ್ಯವಾದ ಸಮಯವನ್ನು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಜತೆಗೆ ರಾಷ್ಟ್ರ ಸೇವೆಗಾಗಿ ಮೀಸಲಿಡುವಂತೆ ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಕರೆ ನೀಡಿದ್ದಾರೆ.

ಸ್ಥಳೀಯ ಕೆಎಲ್‌ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಸಮೀಪದ ನಿಡಸೋಸಿಯಲ್ಲಿ ಹಮ್ಮಿಕೊಂಡಿರುವ ವಾರ್ಷಿಕ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೆಎಲ್‌ಇ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಸಗರೆ ಮಾತನಾಡಿ, ಕಾನೂನು ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸೇವಾ ಮನೋಭಾವ ಅತಿಮುಖ್ಯವಾಗಿದ್ದು, ಸಮಾಜದಲ್ಲಿ ಉತ್ತಮ ನ್ಯಾಯವಾದಿಗಳಾಗಿ ಹೊರಹೊಮ್ಮಬೇಕು ಎಂದರು.

ಪ್ರಾಚಾರ್ಯ ಡಿ.ಬಿ.ಸೊಲ್ಲಾಪುರೆ ಸ್ವಾಗತಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಪಿ.ಎಂ.ಕಮತೆ ಪ್ರಾಸ್ತಾವಿಕ ಮಾತನಾಡಿದರು. ಶ್ರೀಕಾಂತ ಸತ್ತಿ ವಂದಿಸಿದರು.