ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯ ಪ್ರಜ್ಞೆ

nss-1
ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ಶಿಬಿರವನ್ನು ರಾಜ್ಯ ಕ್ರಷರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಡಾ.ರವೀಂದ್ರ ಶೆಟ್ಟಿ ಬಜಗೋಳಿ ಉದ್ಘಾಟಿಸಿದರು
Published on

ಕಾರ್ಕಳ: ವಿದ್ಯಾರ್ಥಿಗಳು ಬಾಲ್ಯದಿಂದಲೇ ವ್ಯಕ್ತಿತ್ವವನ್ನು ಅರಳಿಸುವ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕೇವಲ ನಮಗಾಗಿ ಬದುಕದೆ ಇತರರಿಗಾಗಿ, ಸಮಾಜ ಕಾರ್ಯಕ್ಕಾಗಿ ಜೀವನ ಮೀಸಲಿಡಬೇಕು. ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ನಾಗರಿಕ ಜವಾಬ್ದಾರಿಯ ಪ್ರಜ್ಞೆ ಬೆಳೆಸುತ್ತದೆ ಎಂದು ರಾಜ್ಯ ಕ್ರಷರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಡಾ.ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ ಇಲಾಖೆ) ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ವತಿಯಿಂದ ಜೀವವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ ಲಿಂಗ ಸಮಾನತೆ ಸಾಧಿಸಿ ಎಂಬ ಶೀರ್ಷಿಕೆಯಡಿ ಅ.2ರಿಂದ 8ರವರೆಗೆ ಬಜಗೋಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದಲ್ಲಿ ನಡೆಯಲಿರುವ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯ ಪ್ರಾಂತೀಯ ವಿಭಾಗಾಧಿಕಾರಿ ಸವಿತಾ ಎರ್ಮಾಳ್, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಭಾಸ್ಕರ್ ಎಸ್.ಪೂಜಾರಿ, ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್, ಉದ್ಯಮಿ ಗಣೇಶ್ ಕಾಮತ್, ಜೆರಾಲ್ಡ್ ಡಿಸಿಲ್ವಾ, ಬಜಗೋಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಲಕ್ಷ್ಮೀನಾರಾಯಣ ಭಟ್, ಹಿರಿಯ ಶಿಕ್ಷಕ ಬಸವರಾಜ ತಾವರಗಿ ಉಪಸ್ಥಿತರಿದ್ದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ.ಬಿ.ಗಣನಾಥ ಶೆಟ್ಟಿ ಸ್ವಾಗತಿಸಿ, ಜೀವಶಾಸ್ತ್ರ ವಿಭಾಗ ಮುಖ್ಯಸ್ಥ ಲೋಹಿತ್ ಎಸ್.ಕೆ. ನಿರೂಪಿಸಿ, ಶಿಬಿರಾಧಿಕಾರಿ ಉಮೇಶ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net