

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ
ಎನ್ನೆಸ್ಸೆಸ್ ಶಿಬಿರ ಬದುಕಿನ ಪಾಠ ಕಲಿಸುತ್ತದೆ. ಸೇವಾ ಮನೋಭಾವನೆಗಳಿಂದ ಯುವ ಜನಾಂಗದಲ್ಲಿ ಜೀವನ ಮೌಲ್ಯಗಳು ವೃದ್ಧಿಯಾಗುತ್ತವೆ ಎಂದು ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ ಹೇಳಿದರು.
ಗುತ್ತಿಗಾರು ಪದವಿ ಪೂರ್ವ ಕಾಲೇಜಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪ್ರಾಂಶುಪಾಲ ಡಾ.ದಿನೇಶ ಪಿ.ಟಿ. ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಗುತ್ತಿಗಾರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಕುಶಾಲಪ್ಪ ತುಂಬತ್ತಾಜೆ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ವೇಣೂರು ಪದವಿ ಪೂರ್ವ ಕಾಲೇಜಿನ ಸಹಶಿಕ್ಷಕ ಹೆರಾಲ್ಡ್ ನೆಲ್ಸನ್ ಕ್ಯಾಸ್ಟೋಲಿನೋ, ಗುತ್ತಿಗಾರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಚೆನ್ನಮ್ಮ, ಕೆಎಸ್‌ಎಸ್ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಎನ್., ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ., ಶಿಬಿರ ಸಂಯೋಜಕ ಸುಧೀರ್ ಅಮೈ, ಗುತ್ತಿಗಾರು ಕಾಲೇಜಿನ ಎಸ್‌ಡಿಎಂಸಿ ಸದಸ್ಯ ಕೇಶವ ಕಾಂತಿಲ, ಎನ್‌ಎಸ್‌ಎಸ್ ಯೋಜನಾಧಿಕಾರಿ ಸುಮಿತ್ರಾ, ಘಟಕದ ನಾಯಕರಾದ ನಿಶಾ ಗೌರಿ ಎಂ., ಧನ್ಯಾ ಬಿ.ಎಸ್., ಪ್ರದೀಪ್ ಸಿ.ವಿ., ಜೀವನ್ ಎ. ಉಪಸ್ಥಿತರಿದ್ದರು. ಗುತ್ತಿಗಾರು ಕಾಲೇಜಿನ ಪ್ರೌಢಶಾಲಾ ವಿಭಾಗ ಮುಖ್ಯಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು. ಎನ್‌ಎಸ್‌ಎಸ್ ಘಟಕ ಯೋಜನಾಧಿಕಾರಿ ಆರತಿ ಕೆ. ವಂದಿಸಿದರು. ಜೀವಿತ್ ನಿರೂಪಿಸಿದರು.