

ಬಂಟ್ವಾಳ: ಜಗತ್ತಿನಲ್ಲಿ ಭಾರತ ಅತಿ ಹೆಚ್ಚು ಯುವಕರನ್ನು ಹೊಂದಿರುವ ರಾಷ್ಟ್ರವಾಗಿದ್ದು, ಶಾಲಾ-ಕಾಲೇಜುಗಳಲ್ಲಿನ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣ ಪಡೆಯುವ ಮೂಲಕ ಗುರು, ಹಿರಿಯರಿಗೆ ಗೌರವ ನೀಡಬೇಕು. ಒಳ್ಳೆಯ ಮಾತುಗಾರಿಕೆ ಮತ್ತು ನಡವಳಿಕೆ ಹಾಗೂ ಒಳ್ಳೆಯ ವ್ಯಕ್ತಿಗಳ ಸಂಪರ್ಕದಿಂದ ಜೀವನದಲ್ಲಿ ಎಲ್ಲವನ್ನು ಪಡೆಯಲು ಸಾಧ್ಯ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.
ಸಿದ್ದಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಡುಬಿದಿರೆ ರೋಟರಿ ಪದವಿಪೂರ್ವ ಕಾಲೇಜಿನ ರಾಷ್ಟ್ರಿಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರದ ಸಮೋರೋಪ ಸಮಾರಂಭದಲ್ಲಿ ಮಾತನಾಡಿದರು.
ರೋಟರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ನಾರಾಯಣ ಪಿ.ಎಂ. ಅಧ್ಯಕ್ಷತೆ ವಹಿಸಿದ್ದರು. ರೋಟರಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಅನಂತ ಕೃಷ್ಣ ರಾವ್, ಸಂಚಾಲಕ ಪ್ರವೀಣ್ ಚಂದ್ರ ಜೈನ್, ಜೆ.ಡಬ್ಲುೃ.ಪಿಂಟೋ, ಡಾ ಸುದೀಪ್ ಕುಮಾರ್ ಜೈನ್, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಸ್ಥಾಪಕ ಅಧ್ಯಕ್ಷ ಮೈಕಲ್ ಡಿಕೋಸ್ತ, ಕಾರ್ಯದರ್ಶಿ ಟೀನಾ ಡಿಕೋಸ್ತ, ಪ್ರಾಂಶುಪಾಲ ರವಿಕುಮಾರ್, ಎನ್.ಎಸ್.ಎಸ್. ಯೋಜನಾಧಿಕಾರಿ ನಯನಾ ದಿನೇಶ್ ಕೋಟ್ಯಾನ್ ಉಪಸ್ಥಿತರಿದ್ದರು.