ಅದಮಾರು ಮಠದ ಈಶಪ್ರಿಯ ಶ್ರೀ ಆಶೀರ್ವಚನ
ಎನ್ಎಸ್ಎಸ್ ಶಿಬಿರ ಸಮಾರೋಪ ಸಮಾರಂಭ
ವಿಜಯವಾಣಿ ಸುದ್ದಿಜಾಲ ಉಡುಪಿ
ವಿದ್ಯಾರ್ಥಿಗಳು ಶಾಂತ ರೀತಿಯಿಂದ ಸ್ಪಂದಿಸುವ ಮತ್ತು ವರ್ತಿಸುವ ಗುಣ ಕಲಿಯಬೇಕು. ಸಮಾಜಕ್ಕೆ ಸೇವೆ ಮಾಡುವಂತಹ ಮನೋಭಾವನೆಯನ್ನೂ ರೂಢಿಸಿಕೊಳ್ಳಬೇಕು. ಅದರಿಂದ ಸಮಾಜದ ಬದಲಾವಣೆ, ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅದಮಾರು ಮಠದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಈಶಪ್ರಿಯ ತೀರ್ಥ ಶ್ರೀಪಾದರು ನುಡಿದರು.
ಉಡುಪಿಯ ಅಲೆವೂರು ದತ್ತು ಗ್ರಾಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಹಾಗೂ ಪೂರ್ಣಪ್ರಜ್ಞ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ವಾರಗಳ ಕಾಲ ವಾರ್ಷಿಕ ವಿಶೇಷ ಶಿಬಿರ ನಡೆದಿದ್ದು, ಗುರುವಾರ ಆಯೋಜಿಸಿದ್ದ ಸಮಾರೋಪ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಅದಮಾರು ಮಠದ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಡಾ. ಎ.ಪಿ. ಭಟ್, ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ.ರಾಮು ಎಲ್., ಆಡಳಿತಾಧಿಕಾರಿ ಪುಂಡರೀಕಾಕ್ಷ ಕೊಡಂಚ, ಆಡಳಿತ ಮಂಡಳಿಯ ಸದಸ್ಯ ನಿತ್ಯಾನಂದ, ಸುಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪಷ್ಪಲತಾ ಬಿ.ಎಸ್., ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಡಾ.ನಾಗರಾಜ್ ಜಿ.ಪಿ., ಸುಪರ್ಣಾ, ಸಹ ಯೋಜನಾಧಿಕಾರಿಗಳಾದ ಸ್ವಾತಿ, ಮಹೇಶ್ ಶೆಟ್ಟಿ ಹಾಗೂ ಶಿಬಿರಾರ್ಥಿಗಳು ಇದ್ದರು.