More

    ಸೇವಾ ಮನೋಭಾವ ಬೆಳೆಸುವ ಎನ್‌ಎಸ್‌ಎಸ್: ಕೃಷಿಕ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ.ಹನುಮಂತು ಅಭಿಮತ

    ಮಂಡ್ಯ: ವಿದ್ಯಾರ್ಥಿಗಳಿಗೆ ಶ್ರಮದ ಮಹತ್ವ ತಿಳಿಸುವಲ್ಲಿ ಹಾಗೂ ಸೇವಾ ಮನೋಭಾವ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಅಮೋಘ ಎಂದು ಕೃಷಿಕ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ.ಹನುಮಂತು ಹೇಳಿದರು.
    ನಗರದ ಮಹಿಳಾ ಸರ್ಕಾರಿ ಕಾಲೇಜಿ(ಸ್ವಾಯತ್ತ)ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕೃಷಿಕ ಲಯನ್ಸ್ ಸಂಸ್ಥೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಎನ್‌ಎಸ್‌ಎಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ನಾಯಕತ್ವ, ಪ್ರತಿಭೆ, ಶಿಸ್ತು, ಸಮಯ, ಸಹಬಾಳ್ವೆ, ಸಹಭೋಜನ, ವ್ಯಕ್ತಿತ್ವ ವಿಕಸನ, ಆತ್ಮವಿಶ್ವಾಸ, ರಾಷ್ಟ್ರೀಯ ಭಾವೈಕ್ಯತೆ ಮುಂತಾದ ಶ್ರೇಷ್ಠ ಮೌಲ್ಯಯುತ ಗುಣಗಳನ್ನು ಎನ್‌ಎಸ್‌ಎಸ್ ಬೆಳೆಸುವುದರೊಂದಿಗೆ ರಾಷ್ಟ್ರಕಟ್ಟುವ ಕೆಲಸ ಮಾಡುತ್ತಿದೆ. ಇಲ್ಲಿ ವಿದ್ಯಾರ್ಥಿನಿಯರು-ವಿದ್ಯಾರ್ಥಿಗಳು ಎನ್ನುವ ತಾರತಮ್ಯವಿಲ್ಲದೆ ಒಗ್ಗಟ್ಟಿನಲ್ಲಿ ಬಲವಿದೆ ಎನ್ನುವ ಮನೋಭಾವ ಬೆಳೆಸುತ್ತದೆ. ಇದೊಂದು ಸಮುದಾಯ ಸೇವೆಗಾಗಿ ಹುಟ್ಟಿದ ಸಂಘಟನೆ ಆಗಿದೆ ಎಂದರು.
    ಎನ್‌ಎಸ್‌ಎಸ್ ಜಿಲ್ಲಾ ಸಂಯೋಜನಾಧಿಕಾರಿ ಡಾ.ಕೆಂಪಮ್ಮ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳ ಆಧಾರದ ಮೇಲೆ ಸ್ಥಾಪಿಸಿರುವ ಕೇಂದ್ರ ಸರ್ಕಾರದ ಈ ಯೋಜನೆಯ ಸದುಪಯೋಗವನ್ನು ಪಡೆದುಕೊಂಡು ಶಿಕ್ಷಣದೊಂದಿಗೆ ದೇಶ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬಹುದು. ಇಲ್ಲಿ ಆಸಕ್ತಿ ಇದ್ದವರಿಗೆ ಮಾತ್ರ ಅವಕಾಶ ಹೆಚ್ಚಿರುತ್ತದೆ ಎಂದು ಸಲಹೆ ನೀಡಿದರು.
    ಕಾಲೇಜಿನ ಪ್ರಾಂಶುಪಾಲ ಡಾ.ಆರ್.ದಶರಥ, ಸಹಾಯಕ ಪ್ರಾಧ್ಯಾಪಕ ಪ್ರಸನ್ನಕುಮಾರ್, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಘಟಕ-2 ಶಿವರಾಜು, ಪ್ರತಿಭಾಂಜಲಿ ಸಂಸ್ಥೆ ಅಧ್ಯಕ್ಷ ಪ್ರೊ.ಡೇವಿಡ್ ಇತರರಿದ್ದರು. ಇದೇ ಸಂದರ್ಭದಲ್ಲಿ ಎನ್‌ಎಸ್‌ಎಸ್ ದಿನಾಚರಣೆ ಅಂಗವಾಗಿ ಕಾಲೇಜು ಆವರಣದಲ್ಲಿ ವಿವಿಧ ಸಸಿಗಳನ್ನು ನೆಡಲಾಯಿತು.

    ರಾಜ್ಯೋತ್ಸವ ರಸಪ್ರಶ್ನೆ - 23

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts