More

    ಎನ್‌ಎಸ್‌ಯುಐ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಮ್ಮೂರ ಹೆಮ್ಮೆ ಪ್ರತಿಭಾ ಪುರಸ್ಕಾರ

    ಪುತ್ತೂರು: ಎನ್‌ಎಸ್‌ಯುಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ತಾಲೂಕಿನ 100ಕ್ಕಿಂತಲೂ ಹೆಚ್ಚಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಮ್ಮೂರ ಹೆಮ್ಮೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಗರದ ಕ್ರಿಸ್ಟೋಫರ್ ಹಾಲ್‌ನಲ್ಲಿ ನಡೆಯಿತು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಎನ್‌ಎಸ್‌ಯುಐ ಪುತ್ತೂರು ಘಟಕದ ಅಧ್ಯಕ್ಷ ಚಿರಾಗ್ ರೈ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ವಿದ್ಯಾಮಾತಾ ಅಕಾಡೆಮಿಯ ಬಾಗೇಶ್ ರೈ ನಡೆಸಿಕೊಟ್ಟರು
    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ್ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಕೆ.ಬಿ., ನಗರ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಅಲಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ಪುತ್ತೂರು ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ರೈ ಇದ್ದರು. ಜಿಲ್ಲಾ ಎನ್‌ಎಸ್‌ಯುಐ ಮುಖಂಡ ಬಾತೀಷ್ ಅಳಕೆಮಜಲು ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts