More

    ಸಚಿವರ ಕಚೇರಿ ಎದುರು ಎನ್​ಎಸ್​ಯುುಐ ಪ್ರತಿಭಟನೆ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ರಾಜ್ಯದಿಂದ ಸಂದಾಯವಾಗುವ ತೆರಿಗೆ ಹಣವನ್ನು ಹಂಚಿಕೆ ಮಾಡುವಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ (ಎನ್​ಎಸ್​ಯುುಐ)ದ ಕಾರ್ಯಕರ್ತರು ನಗರದ ಚಿಟಗುಪ್ಪಿ ಆಸ್ಪತ್ರೆ ಬಳಿಯಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಪ್ರತಿಭಟನಾಕಾರರು ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ಹಾಗೂ ಸಚಿವ ಜೋಶಿ ವಿರುದ್ಧ ಘೊಷಣೆ ಕೂಗುತ್ತ ಸಚಿವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಕಚೇರಿಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ, ಪ್ರಧಾನಿ ಮೋದಿ ಮೋದಿ… ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಜಯವಾಗಲಿ ಎಂದು ಘೊಷಣೆ ಕೂಗಿದರು.

    ಇದಕ್ಕೆ ಪ್ರತ್ಯುತ್ತರವಾಗಿ ಎನ್​ಎಸ್​ಯುುಐ ಕಾರ್ಯಕರ್ತರು ರಾಹುಲ್, ರಾಹುಲ್…, ಒಂದೇ ಮಾತರಂ..ಘೊಷಣೆ ಕೂಗಿದರು. ಬಳಿಕ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ ಕಾರ್ಯಕರ್ತರು ಸಚಿವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಕೊಳಿಸಿ ಪ್ರತಿಭಟನಾಕಾರರನ್ನು ಚದುರಿಸಿದರು.

    ಎನ್​ಎಸ್​ಯುುಐನ ಅಧ್ಯಕ್ಷ ಸೌರಭ ಮಸೇಕರ ಮಾತನಾಡಿ, ಕೇಂದ್ರ ಸರ್ಕಾರ ತೆರಿಗೆ ಹಣವನ್ನು ಸಮಾನವಾಗಿ ಹಂಚಿಕೆ ಮಾಡುವ ವಿಚಾರದಲ್ಲಿ ಅನ್ಯಾಯ ಮಾಡುತ್ತಿದೆ. ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ಈ ಬಗ್ಗೆ ಏನು ಮಾತನಾಡುತ್ತಿಲ್ಲ. ನ್ಯಾಯಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.

    ಸದಸ್ಯ ನಾಗರಾಜ ಕೊಟಗಿ, ರಾಜ್ಯವು ಅತಿ ಹೆಚ್ಚು ತೆರಿಗೆ ಹಣ ಪಾವತಿಸುತ್ತಿದೆ. ಆದರೆ, ಕೇಂದ್ರ ಸರ್ಕಾರ ಈ ಹಣವನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳ ಹಂಚಿಕೆ ಮಾಡುತ್ತಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯಕ್ಕೆ ಬರಬೇಕಾದ ತೆರಿಗೆ ಹಂಚಿಕೆ ಸರಿಯಾಗಿ ನೀಡಿದರೆ ರಾಜ್ಯದ ಎಲ್ಲ ಕ್ಷೇತ್ರದ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

    ರೋಹಿತ ಘೊಡಕೆ, ಬಸನಗೌಡ ಪಾಟೀಲ, ವಿಶಾಲ ಮಾನೆ, ರೋಹನ ಹಿಪ್ಪರಗಿ, ಹುಸೇನ ಹಾಜಿ, ಇರ್ಫಾನ್ ಪಠಾಣ, ಶಿವಾ ಬೆಂಡಿಗೇರಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts