CUET UG Result 2023: ಸಿಯುಇಟಿ ಯುಜಿ ಫಲಿತಾಂಶ ಪ್ರಕಟ

resultt
Published on

ಬೆಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET UG) 2023 ಫಲಿತಾಂಶ ಇಂದು ಜುಲೈ 15 ರಂದು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ cuet.samarth.ac.in, nta.ac.in.ನಲ್ಲಿ ಪರಿಶೀಲಿಸಬಹುದು.

ಫಲಿತಾಂಶ ಪರಿಶೀಲಿಸಲು ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಲಾಗಿನ್ ಆಗಿ ಬಳಸಬೇಕಾಗುತ್ತದೆ. ಒಟ್ಟು 1499796 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಇದರಲ್ಲಿ 383778 ಗೈರು ಹಾಜರಾಗಿದ್ದಾರೆ. ಒಟ್ಟು 1116011 ವಿಶೇಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಪರೀಕ್ಷೆಯನ್ನು ಅಸ್ಸಾಮಿ, ಬೆಂಗಾಲಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಪಂಜಾಬಿ, ಒಡಿಯಾ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ನಡೆಸಲಾಯಿತು.

ಪರೀಕ್ಷೆಯಲ್ಲಿ ತೇರ್ಗಡೆಯಾದ ಎಲ್ಲಾ ಅಭ್ಯರ್ಥಿಗಳನ್ನು ಯುಜಿಸಿ ಅಭಿನಂದಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net