25.7 C
Bangalore
Sunday, December 15, 2019

ಕಾಯಕಲ್ಪ ಪ್ರಶಸ್ತಿ ವಿಜೇತ ಆಸ್ಪತ್ರೆಯಲ್ಲೇ ನಾಗರಿಕ ಸಮಾಜ ನಾಚಿಸುವ ಘಟನೆ: ಆಸ್ಪತ್ರೆ ಬೆಡ್ ಮೇಲೆ ನಾಯಿ; ಬೆತ್ತಲೆ ರೋಗಿ !

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ವಿಜಯಪುರ: ಗುಣಮಟ್ಟದ ಸೇವೆಗಾಗಿ ಎರಡು ಬಾರಿ ರಾಜ್ಯ ಮಟ್ಟದ ಕಾಯಕಲ್ಪ ಪ್ರಶಸ್ತಿ ಪಡೆದ ಜಿಲ್ಲಾಸ್ಪತ್ರೆಯಲ್ಲಿ ರೋಗಿ ಮಲಗಬೇಕಿದ್ದ ಜಾಗದಲ್ಲಿ ನಾಯಿ ಮಲಗಿದ್ದು, ಇನ್ನೊಂದೆಡೆ ರೋಗಿಯೊಬ್ಬ ಪ್ರಾಣಿಗಿಂತಲೂ ನಿಕೃಷ್ಟವಾಗಿ ಬೆತ್ತೆಲೆಯಾಗಿ ಮಲಗಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ.

ರಾಜ್ಯದಲ್ಲೇ ನಂ.1 ಸ್ಥಾನ ಪಡೆದ ಜಿಲ್ಲಾಸ್ಪತ್ರೆ ಮೊದಲ ಮಹಡಿಯ ವಾರ್ಡ್‌ವೊಂದರಲ್ಲಿ ಭಾನುವಾರ ರಾತ್ರಿ ಈ ದೃಶ್ಯ ಕಂಡು ಬಂದಿದೆ. ಸಾಮಾಜಿಕ ಕಾರ್ಯಕರ್ತರೊಬ್ಬರು ನಾಯಿ ಮತ್ತು ರೋಗಿಯ ದೃಶ್ಯಾವಳಿಗಳನ್ನು ಸೆರೆ ಹಿಡಿದಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.

ಏನಿದು ಪ್ರಕರಣ?: ಭಾನುವಾರ ರಾತ್ರಿ ಜಿಇ (ಗ್ಯಾಸ್ಟ್ರೋ ಇಂಟ್ರಾಯಿಸ್ಟ್) ವಾರ್ಡ್‌ನಲ್ಲಿ ರೋಗಿಯೊಬ್ಬ ಬೆತ್ತಲೆಯಾಗಿ ಬೆಡ್​ ಮೇಲೆ ಮಲಗಿದ್ದ. ಸುತ್ತಮುತ್ತ ಯಾವುದೇ ರೋಗಿಗಳಾಗಲಿ, ಆಸ್ಪತ್ರೆ ಸಿಬ್ಬಂದಿಯಾಗಲಿ ಇರಲಿಲ್ಲ. ಕತ್ತಲೆಯಲ್ಲಿ ಆತನೊಬ್ಬನೇ ನರಳುತ್ತಿದ್ದ. ಆತನಿಗೆ ಹತ್ತಿರವಾಗಿದ್ದ ಇನ್ನೊಂದು ಬೆಡ್‌ನಲ್ಲಿ ನಾಯಿಯೊಂದು ನಿರುಮ್ಮಳವಾಗಿ ಮಲಗಿತ್ತು. ಇದನ್ನು ಕಂಡ ಸಾಮಾಜಿಕ ಕಾರ್ಯಕರ್ತನೊಬ್ಬ ಈ ದೃಶ್ಯವನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ.

ರೋಗಿಯನ್ನು ಮಾತನಾಡಿಸಿದಾಗ ಆತ ಅಸ್ಪಷ್ಟ ಧ್ವನಿಯಲ್ಲಿ ವಿವರಣೆ ನೀಡಲೆತ್ನಿಸಿದ್ದಾನೆ. ಸಿಬ್ಬಂದಿಯಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲವೆಂದು ಮನವರಿಕೆಯಾದ ಹಿನ್ನೆಲೆ ಸದರಿ ಕಾರ್ಯಕರ್ತರ ಆ ವಿಡಿಯೋ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ.

ವೈದ್ಯರು ಹೇಳೋದೇನು?: ನಾಲ್ಕು ದಿನಗಳ ಹಿಂದೆ 108 ಸಿಬ್ಬಂದಿ ಸದರಿ ರೋಗಿಯನ್ನು ಆಸ್ಪತ್ರೆಗೆ ತಂದು ಬಿಟ್ಟಿದ್ದಾರೆ. ಈತನ ಹೆಸರು ರವಿ ಪಾಟೀಲ. ಮೂಲತಃ ವಿಜಯಪುರದವನು. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ. ಮೊದಲಿಗೆ ಈತನನ್ನು ಸಾಮಾನ್ಯ ವಾರ್ಡ್‌ನಲ್ಲೇ ಇರಿಸಲಾಗಿತ್ತು. ಆದರೆ, ಈತ ಬಟ್ಟೆ ಬಿಚ್ಚುವುದು, ಕುಳಿತಲ್ಲೇ ಮೂತ್ರ ವಿಸರ್ಜನೆ ಮಾಡುವುದನ್ನು ಕಂಡ ಇತರೆ ರೋಗಿಗಳು ವೈದ್ಯರಿಗೆ ದೂರು ನೀಡಿದ್ದರು.

ಇತರೆ ರೋಗಿಗಳ ದೂರಿಗೆ ಸ್ಪಂದಿಸಿದ ವೈದ್ಯರು ಆತನನ್ನು ಪ್ರತ್ಯೇಕ ಕೋಣೆಯಲ್ಲಿ ಒಬ್ಬನನ್ನೇ ಇರಿಸಲು ನಿರ್ಧರಿಸಿದರು. ಆತನಿಗೆ ಚಿಕಿತ್ಸೆ ನೀಡಲಾಗಿದ್ದು ಇನ್ನೇನು ವಿಶೇಷ ತಜ್ಞರಿಗೆ ಶಿಫಾರಸು ಮಾಡಬೇಕಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಾ ತಜ್ಞ ಡಾ. ಕಟ್ಟಿ ತಿಳಿಸಿದ್ದಾರೆ.

ನಾಯಿ ಬಂದಿದ್ದು ಹೇಗೆ?: ರೋಗಿಯ ವ್ಯಥೆ ಹೀಗಾದರೆ ನಾಯಿ ಕತೆ ಏನು? ಆಸ್ಪತ್ರೆಯಲ್ಲಿ ರೋಗಿಗಳು ಊಟ ಮಾಡಿ ಆಹಾರ ಎಸೆಯುತ್ತಾರೆ. ಹೀಗಾಗಿ ನಾಯಿಗಳ ಪ್ರಮಾಣ ಹೆಚ್ಚಾಗಿದೆ. ಅದು ಹೇಗೋ ಖಾಲಿ ಕೋಣೆಗೆ ಬಂದು ಮಲಗಿದೆ. ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇರುವುದು ಈ ಅವಾಂತರಕ್ಕೆ ಕಾರಣ. ಎಂದು ಡಾ.ಕಟ್ಟಿ ಸ್ಪಷ್ಟಪಡಿಸಿದ್ದಾರೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...