ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಭರವಸೆ ನೀಡಿತ್ತು.
ಈ ಯೋಜನೆಗೆ ಸಂಬಂಧಪಟ್ಟ ನೋಂದಣಿ ಕಾರ್ಯಕ್ಕೆ ಸರ್ಕಾರ ಜೂನ್ 18ರಂದು ಅಧಿಕೃತವಾಗಿ ಚಾಲನೆ ನೀಡಿತ್ತು. ಇದೀಗ ಜುಲೈ 5ರವರೆಗೆ ಒಟ್ಟು ಒಂದು ಕೋಟಿಗೂ ಅಧಿಕ ಸಂಖ್ಯೆಯಲ್ಲಿ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ.
ಜುಲೈ 5ರ ವರೆಗೆ 1 ಕೋಟಿ 20 ಸಾವಿರದ 163 ಮಂದಿಯಿಂದ ನೊಂದಣಿ ಮಾಡಿಸಿಕೊಂಡಿದ್ದು ಬೆಸ್ಕಾಂ ವಿಭಾಗದಲ್ಲೇ ಅತಿಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 6 ಸಂಸ್ಥೆಗಳಿದ್ದು ಅವುಗಳ ಪ್ರದೇಶದಲ್ಲಿ ಒಟ್ಟು ಎಷ್ಟು ಜನರು ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎನ್ನುವುದರ ಕುರಿತು ಇಲ್ಲಿದೆ ಮಾಹಿತಿ:
- BESCOM -41,14,567
- CESC- 15,35,045
- GESCOM – 10,54,359
- HESCOM- 21,09,473
- HRECS -50,425
- MESCOM- 11,56,294