More

    ಸಾರಿಗೆ ಸಚಿವರ ತವರು ಜಿಲ್ಲೆಯಲ್ಲಿ ಅವ್ಯವಸ್ಥೆ; ಒಂದೇ ಆಟೋದಲ್ಲಿ 40ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಪ್ರಯಾಣ!

    ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ತವರು ಜಿಲ್ಲೆಯಲ್ಲಿ ಬಸ್​ ಇಲ್ಲದೆ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಸರ್ಕಾರಿ ಬಸ್ ಇಲ್ಲದೆ, ಅವ್ಯವಸ್ಥೆಯಿಂದಾಗಿ ಶಾಲಾ ವಿದ್ಯಾರ್ಥಿಗಳು ಆಟೋ ರಿಕ್ಷಾದಲ್ಲಿ ಮುಗಿಬಿದ್ದು ಸಂಚರಿಸುವಂತಾಗಿದೆ.

    ಬಳ್ಳಾರಿ ಜಿಲ್ಲೆಯ ಕಂಪ್ಲಿಯ ಅರಳಿಹಳ್ಳಿ ಗ್ರಾಮದಲ್ಲಿ ಬಸ್ ಇಲ್ಲದೇ ವಿದ್ಯಾರ್ಥಿಗಳ ಪರದಾಡಿದ್ದಾರೆ. ಇದೀಗ ಬಸ್​ ಇಲ್ಲದೆ, ಒಂದೇ ಆಟೋ ರಿಕ್ಷಾಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ತೆರಳಿದ್ದಾರೆ. ಪ್ರಾಣದ ಹಂಗು ತೊರೆದು ಆಟೋ ರಿಕ್ಷಾ ಮೇಲೆ ಕುಳಿತು ವಿದ್ಯಾರ್ಥಿಗಳು ಶಾಲೆಗೆ ತೆರಳುತ್ತಿರುವ ದೃಶ್ಯವನ್ನು ಸಾರ್ವಜನಿಕರೊಬ್ಬರು ಫೋಟೋ ತೆಗೆದಿದ್ದಾರೆ. ಇದರಿಂದಾಗಿ ಸಾರಿಗೆ ಸಚಿವರ ತವರು ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆಯ ಅವ್ಯವಸ್ಥೆ ಬಯಲಾಗಿದೆ.

    ಅರಳಿಹಳ್ಳಿಯಿಂದ ಸಾಣಾಪುರ ಗ್ರಾಮಕ್ಕೆ ತೆರಳುವ ವಿದ್ಯಾರ್ಥಿಗಳಿ‌ಗೆ ಬಸ್ ಜೀವಭಯದಲ್ಲೇ ಸಿಕ್ಕ ಸಿಕ್ಕ ವಾಹನದಲ್ಲಿ ನೇತಾಡಿಕೊಂಡು ಹೋಗಬೇಕಾಗಿದೆ. ಸ್ಪಲ್ಪ ಎಡವಿದರೂ ಪ್ರಾಣಾಪಾಯ ಖಂಡಿತ ಎಂಬಂತಾಗಿದೆ. ಇದೀಗ ಕೆಎಸ್​ಆರ್​ಟಿಸಿ ಅಧಿಕಾರಿಗಳ ನಡೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಮರ್ಪಕವಾಗಿ ಬಸ್ ಸಂಚರಿಸುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts