More

    ಮೀನುಗಾರಿಕೆಯಲ್ಲಿ ರಾಜ್ಯ ನಂ.1 ಸ್ಥಾನಕ್ಕೆ

    ಗಂಗೊಳ್ಳಿ: ಕಡಲ ಮೀನುಗಾರಿಕೆಯಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದ್ದು, ಒಳನಾಡು ಮೀನು ಉತ್ಪಾದನೆಯಲ್ಲಿ 9ನೇ ಸ್ಥಾನದಲ್ಲಿದೆ. ಮುಂದಿನ ಮೂರು ವರ್ಷಗಳಲ್ಲಿ ರಾಜ್ಯ ಪ್ರಥಮ ಸ್ಥಾನಕ್ಕೆ ತಲುಪುವ ಗುರಿ ಹೊಂದಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಬೈಂದೂರು ವಿಧಾನಸಭಾ ಕ್ಷೇತ್ರದ ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ, ಮರವಂತೆ ಬ್ರೇಕ್ ವಾಟರ್, ಕೊಡೇರಿ ಮೀನುಗಾರಿಕಾ ಜೆಟ್ಟಿ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    12 ಕೋಟಿ ರೂ. ವೆಚ್ಚದಲ್ಲಿ ಗಂಗೊಳ್ಳಿಯಲ್ಲಿ ಹೊಸ ಜೆಟ್ಟಿ ನಿರ್ಮಾಣವಾಗಲಿದ್ದು, ಈ ಪ್ರದೇಶದ ಮೀನುಗಾರಿಕೆಗೆ ಅನುಕೂಲವಾಗಲಿದೆ. ಮರವಂತೆ ಬ್ರೇಕ್‌ವಾಟರ್ ಎರಡನೇ ಹಂತದ ಕಾಮಗಾರಿಗೆ 85 ಕೋಟಿ ರೂ. ಅನುದಾನಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಯೋಜನಾ ವರದಿ ಸಿದ್ಧವಾಗಿ, ಮೂರು ತಿಂಗಳಲ್ಲಿ ಟೆಂಡರ್ ಮುಗಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಕೊಡೇರಿ ಮೀನುಗಾರಿಕಾ ಜೆಟ್ಟಿ ಮತ್ತು ಉಪ್ಪುಂದ ನಾಡದೋಣಿ ತಂಗುದಾಣದ ಕಿರು ಜೆಟ್ಟಿಗಳ ವಿಸ್ತರಣೆ ಮಾಡಿ ಮೂಲಭೂತ ಸೌಕರ್ಯ, ವಿದ್ಯುತ್ ದೀಪ, ಕೊಂಡಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು. ಯೋಜನೆಗಳನ್ನು ಮಂಜೂರುಗೊಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿದರು.
    ದ.ಕ. ಉಡುಪಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ಜಿಪಂ ಸದಸ್ಯರಾದ ಬಾಬು ಹೆಗ್ಡೆ, ಶೋಭಾ ಪುತ್ರನ್, ಬೈಂದೂರು ತಾಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತಿತತರರು ಉಪಸ್ಥಿತರಿದ್ದರು.

    ಪ್ರಧಾನ ಮಂತ್ರಿಯವರ ಆಶಯಕ್ಕೆ ಪೂರಕವಾಗಿ ಆತ್ಮನಿರ್ಭರ ಭಾರತಕ್ಕೆ ಅನುಗುಣವಾಗಿ ಮತ್ಸ್ಯ ಸಂಪದ ಯೋಜನೆಯಡಿ 10,000 ಉದ್ಯೋಗಾಕಾಂಕ್ಷಿಗಳಿಗೆ ಸ್ವ ಉದ್ಯೋಗ ನೀಡುವ ಗುರಿಯೊಂದಿಗೆ, ರಾಜ್ಯದಾದ್ಯಂತ 100 ಪಂಜರ ಮೀನು ಕೃಷಿ ಕಾರ್ಯಾಗಾರದ ಮೂಲಕ ತರಬೇತಿ ನೀಡಲಾಗುತ್ತಿದೆ.
    – ಕೋಟ ಶ್ರೀನಿವಾಸ ಪೂಜಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts