Numerology: ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು ಕೂಡ ಇದ್ದಾರೆ. ಪ್ರತಿಯೊಂದು ಕೆಲಸ, ಕಾರ್ಯಗಳನ್ನು ಮಾಡಬೇಕಾದರೂ ಜೋತಿಷ್ಯದ ಮೊರೆ ಹೋಗುತ್ತಾರೆ. ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ ಒಂದು.
ಸಾಮಾನ್ಯವಾಗಿ ಸಂಖ್ಯೆಗಳು ನಮ್ಮ ಜೀವನದ ಎಲ್ಲ ವಿಷಯಗಳೊಂದಿಗೆ ಆಳವಾದ ಸಂಬಂಧವನ್ನು ಹೊಂದಿವೆ. ಅಲ್ಲದೆ, ಈ ಸಂಖ್ಯೆಗಳು ನೈಸರ್ಗಿಕವಾಗಿ ವಿಶ್ವದಲ್ಲಿ ವಿಶಿಷ್ಟ ಶಕ್ತಿಯನ್ನು ಹೊಂದಿದ್ದು, ಯಾರನ್ನಾದರೂ ಮೇಲಕ್ಕೇರಿಸಬಹುದು ಮತ್ತು ಕೆಳಗಿಳಿಸಬಹುದು. ಸಂಖ್ಯಾಶಾಸ್ತ್ರವು ವ್ಯಕ್ತಿಯ ಹೆಸರು, ಆತನ ಹುಟ್ಟಿದ ದಿನಾಂಕ, ತಿಂಗಳು, ವರ್ಷದ ಆಧಾರದ ಮೇಲೆ ಅವರ ಭವಿಷ್ಯದ ಜೀವನ ಹೇಗಿರುತ್ತದೆ ಎಂದು ಊಹಿಸುವ ವಿಜ್ಞಾನವಾಗಿದೆ.
ಮದುವೆಯ ದಿನಾಂಕವು ಕೂಡ ವೈವಾಹಿಕ ಜೀವನದ ಮೇಲೆ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ. ಮದುವೆ ಎಂದರೆ ಸಾವಿರ ವರ್ಷದ ಬೆಳೆ ಎಂದು ನಮ್ಮ ಪೂರ್ವಜರು ಹೇಳಿದ್ದಾರೆ. ಏಕೆಂದರೆ, ವೈವಾಹಿಕ ಜೀವನ ಸರಿಯಾಗಿ ನಡೆಯದಿದ್ದರೆ ಜೀವನದುದ್ದಕ್ಕೂ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹೀಗಾಗಿ ಸಂಖ್ಯಾಶಾಸ್ತ್ರದ ಆಧಾರದ ಮೇಲೆ, ಈ ನಿರ್ದಿಷ್ಟ ದಿನಾಂಕಗಳಲ್ಲಿ ಮದುವೆಯಾಗುವುದನ್ನು ತಪ್ಪಿಸಲು ಹೇಳಲಾಗುತ್ತದೆ. ಆ ದಿನಾಂಕಗಳು ಯಾವುವು ಮತ್ತು ಏಕೆ ಮದುವೆ ಆಗಬಾರದು ಎಂಬುದನ್ನು ಈ ಪೋಸ್ಟ್ನಲ್ಲಿ ನಾವು ತಿಳಿದುಕೊಳ್ಳೋಣ.
ಸಂಖ್ಯಾಶಾಸ್ತ್ರದ ಪ್ರಕಾರ, 4, 13, 22 ಮತ್ತು 31ನೇ ತಾರೀಖಿನಂದು ಮದುವೆಯಾಗುವುದನ್ನು ತಪ್ಪಿಸಬೇಕು. ಏಕೆಂದರೆ, ಈ ದಿನದಲ್ಲಿ ಮದುವೆ ಆಗುವವರು ತಮ್ಮ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಮತ್ತು ವಿಚ್ಛೇದನವನ್ನು ಎದುರಿಸಬೇಕಾಗುತ್ತದೆ. ಎಷ್ಟೇ ಪ್ರೀತಿಯಿಂದ ಒಟ್ಟಿಗೆ ವಾಸಿಸುತ್ತಿದ್ದರೂ 4 ವರ್ಷಗಳಲ್ಲಿ ಸಂಬಂಧ ಮುರಿದು ಬೀಳುವ ಸಾಧ್ಯತೆ ಇದೆ ಎಂದು ನಂಬಲಾಗಿದೆ.
ಜ್ಯೋತಿಷ್ಯ ತಜ್ಞರ ಪ್ರಕಾರ, ಮೂಲ ಸಂಖ್ಯೆ 7ರ ಅಡಿಯಲ್ಲಿ ಮದುವೆ ಆದರೂ ತೃಪ್ತಿದಾಯಕ ವೈವಾಹಿಕ ಜೀವನವನ್ನು ನೀಡುವುದಿಲ್ಲ. ಆದ್ದರಿಂದ 7, 16 (1+6 = 7) ಮತ್ತು 25 (2+5 = 7) ರಂದು ಮದುವೆಯನ್ನು ತಪ್ಪಿಸುವುದು ಉತ್ತಮ. ಈ ದಿನಾಂಕಗಳಲ್ಲಿ ಮದುವೆಯಾಗುವ ದಂಪತಿ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಅಲ್ಲದೆ, ವಿಚ್ಛೇದನಕ್ಕೂ ಕಾರಣವಾಗುತ್ತದೆ ಎಂದು ಜ್ಯೋತಿಷಿಗಳು ಎಚ್ಚರಿಸುತ್ತಾರೆ.
ಅದೇ ರೀತಿ 8, 17, 26 ರಂದು ವಿವಾಹವಾಗುವುದರಿಂದ ವೈವಾಹಿಕ ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳು ಉಂಟಾಗುತ್ತವೆ. ದಂಪತಿ ನಡುವೆ ತಿಳುವಳಿಕೆಯ ಕೊರತೆ ಇರುತ್ತದೆ. ಹಾಗಾಗಿ ವೈವಾಹಿಕ ಜೀವನವು ಶೀಘ್ರದಲ್ಲೇ ಹದಗೆಡುತ್ತದೆಯಂತೆ. ಸಂಖ್ಯಾಶಾಸ್ತ್ರದ ಪ್ರಕಾರ, 5, 14 ಮತ್ತು 23 ರಂದು ಮದುವೆಯಾದರೆ, ಜೀವನದಲ್ಲಿ ಆಗಾಗ್ಗೆ ಸಣ್ಣ ಗೊಂದಲಗಳಿಗೆ ಕಾರಣವಾಗುತ್ತದೆ. ಇದು ಹೆಚ್ಚಾಗಿ ಅಶುಭ ಫಲಿತಾಂಶಗಳನ್ನು ನೀಡುತ್ತದೆ. ಆದ್ದರಿಂದ ಮದುವೆಯ ಸಮಯದಲ್ಲಿ ದಿನಾಂಕಗಳಿಗೆ ಪ್ರಾಮುಖ್ಯತೆಯನ್ನು ನೀಡುವುದು ಮುಖ್ಯವಾಗಿದೆ. ಆಗ ಮಾತ್ರ ದಾಂಪತ್ಯ ಜೀವನ ಸುಖ ಶಾಂತಿಯಿಂದ ಕೂಡಿರುತ್ತದೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್ಸೈಟ್ ಜವಾಬ್ದಾರರಾಗಿರುವುದಿಲ್ಲ.
ಈ ದಿನಾಂಕಗಳಲ್ಲಿ ಜನಿಸಿದವರಿಗೆ ಜನ್ಮದಲ್ಲಿ ಲಕ್ಷಾಧಿಪತಿಯಾಗುವ ಯೋಗವಿದೆ! ನೀವೂ ಹುಟ್ಟಿದ್ದು ಇದೇ ದಿನಾನಾ? Numerology