blank

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ ಒಂದು. ಸಂಖ್ಯೆಗಳು ನಮ್ಮ ಜೀವನದ ಎಲ್ಲ ವಿಷಯಗಳೊಂದಿಗೆ ಆಳವಾದ ಸಂಬಂಧವನ್ನು ಹೊಂದಿವೆ. ಅಲ್ಲದೆ, ಈ ಸಂಖ್ಯೆಗಳು ನೈಸರ್ಗಿಕವಾಗಿ ವಿಶ್ವದಲ್ಲಿ ವಿಶಿಷ್ಟ ಶಕ್ತಿಯನ್ನು ಹೊಂದಿದ್ದು, ಯಾರನ್ನಾದರೂ ಮೇಲಕ್ಕೇರಿಸಬಹುದು ಮತ್ತು ಕೆಳಗಿಳಿಸಬಹುದು.

ಅಂದಹಾಗೆ ಸಂಖ್ಯಾಶಾಸ್ತ್ರವು ವ್ಯಕ್ತಿಯ ಹೆಸರು, ಆತನ ಹುಟ್ಟಿದ ದಿನಾಂಕ, ತಿಂಗಳು, ವರ್ಷದ ಆಧಾರದ ಮೇಲೆ ಅವರ ಭವಿಷ್ಯದ ಜೀವನ ಹೇಗಿರುತ್ತದೆ ಎಂದು ಊಹಿಸುವ ವಿಜ್ಞಾನವಾಗಿದೆ. ಈ ಸಂಖ್ಯಾಶಾಸ್ತ್ರವನ್ನು ರಾಡಿಕ್ಸ್ ಸಂಖ್ಯೆಗಳ ಆಧಾರದ ಮೇಲೆ ಹೇಳಲಾಗುತ್ತದೆ. ಒಬ್ಬ ವ್ಯಕ್ತಿಯ ಜನ್ಮ ದಿನಾಂಕದ ಮೊತ್ತವನ್ನು ರಾಡಿಕ್ಸ್ ಸಂಖ್ಯೆ ಅಥವಾ ಮೂಲಾಂಕ ಎಂದು ಕರೆಯಲಾಗುತ್ತದೆ. ಉದಾಹರಣೆಗೆ ಒಬ್ಬ 24ನೇ ತಾರೀಖಿನಂದು ಜನಿಸಿದರೆ ಆತನ ರಾಡಿಕ್ಸ್​ ಸಂಖ್ಯೆ 2+4= 6 ಆಗಿರುತ್ತದೆ.

ರಾಶಿಗಳಂತೆ ರಾಡಿಕ್ಸ್​ ಸಂಖ್ಯೆಗಳು ಕೂಡ ಗ್ರಹಗಳೊಂದಿಗೆ ಸಂಬಂಧ ಹೊಂದಿವೆ. ಸಂಖ್ಯಾಶಾಸ್ತ್ರದಲ್ಲಿ 01 ರಿಂದ 09ರವರೆಗಿನ ಸಂಖ್ಯೆಗಳನ್ನು ರಾಡಿಕ್ಸ್ ಸಂಖ್ಯೆಗಳು ಎಂದು ಹೇಳಲಾಗುತ್ತದೆ. ಈ ಒಂಬತ್ತು ರಾಡಿಕ್ಸ್ ಸಂಖ್ಯೆಗಳು ಕೂಡ ನವಗ್ರಹಗಳಲ್ಲಿ ಒಂದೊಂದು ಗ್ರಹಗಳಿಗೆ ಸೀಮಿತವಾಗಿವೆ.

ಯಾವುದೇ ತಿಂಗಳ 2, 11, 20 ಮತ್ತು 29ನೇ ತಾರೀಖಿನಂದು ಜನಿಸಿದವರ ಅದೃಷ್ಟ ಸಂಖ್ಯೆ ಅಂದರೆ ರಾಡಿಕ್ಸ್​ ಸಂಖ್ಯೆ 2 ಆಗಿರುತ್ತದೆ. ಈ ಸಂಖ್ಯೆಗಳಲ್ಲಿ ಜನಿಸಿದವರ ವಿಶೇಷ ಗುಣಗಳು, ಭವಿಷ್ಯದ ಜೀವನ ಮತ್ತು ನೆಗೆಟಿವ್​ ಗುಣಗಳು ಏನು ಎಂಬುದನ್ನು ನಾವೀಗ ವಿವರವಾಗಿ ತಿಳಿದುಕೊಳ್ಳೋಣ.

ಇದನ್ನೂ ಓದಿ: 3ನೇ ಮಹಾಯುದ್ಧ ತಡೆಯುತ್ತೇನೆ! ಪ್ರಮಾಣ ವಚನಕ್ಕೂ ಮುನ್ನ ಅಮೆರಿಕ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ | Donald Trump

ವಿಶೇಷ ಗುಣಗಳು

2ನೇ ಸಂಖ್ಯೆಯಲ್ಲಿ ಜನಿಸಿದ ಜನರು ಚಂದ್ರನಿಂದ ಆಳಲ್ಪಡುವುದರಿಂದ, ಅವರು ಸ್ವಾಭಾವಿಕವಾಗಿ ಆಕರ್ಷಕ ಮತ್ತು ಕಾಂತೀಯ ಕಣ್ಣುಗಳನ್ನು ಹೊಂದಿರುತ್ತಾರೆ. ಸ್ವಭಾವತಃ ಸೌಮ್ಯರು ಮತ್ತು ಸಭ್ಯರು. ಅವರ ಹೆಚ್ಚಿನ ಬುದ್ಧಿವಂತಿಕೆಯೇ ಯಶಸ್ಸಿಗೆ ಪ್ರಮುಖ ಕಾರಣವಾಗಿರುತ್ತದೆ. ಮೆದುಳಿನ ಶ್ರಮ ಅಗತ್ಯವಿರುವ ಎಲ್ಲ ಕ್ಷೇತ್ರಗಳಲ್ಲಿ ಅವರು ಸುಲಭವಾಗಿ ಯಶಸ್ವಿಯಾಗುತ್ತಾರೆ. ಹೊಸ ಆವಿಷ್ಕಾರಗಳನ್ನು ರಚಿಸುವಲ್ಲಿ ಸದಾ ಮುಂದಿರುತ್ತಾರೆ. 2ನೇ ಸಂಖ್ಯೆಯಲ್ಲಿ ಜನಿಸಿದ ಜನರು ತಮ್ಮ ಬುದ್ಧಿವಂತಿಕೆಯಿಂದಾಗಿ ಸಮಾಜದಲ್ಲಿ ಇತರರಿಗಿಂತ ಹೆಚ್ಚಿನ ಗೌರವವನ್ನು ಪಡೆಯುತ್ತಾರೆ. ಯಾವುದೇ ಪರಿಸ್ಥಿತಿಗೆ ತಕ್ಷಣ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತಾರೆ.

ನಕಾರಾತ್ಮಕ ಗುಣಗಳು

2ನೇ ಸಂಖೆಯಲ್ಲಿ ಜನಿಸಿದ ಜನರಲ್ಲಿ ಕೆಲವು ನಕಾರಾತ್ಮಕ ಗುಣಗಳು ಸಹ ಇರುತ್ತವೆ. ಸ್ವಾಭಾವಿಕವಾಗಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಕಡಿಮೆ ಇರುವುದರಿಂದ, ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಗಂಭೀರ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಈ ಸಂಖ್ಯೆಗಳಲ್ಲಿ ಜನಿಸಿದ ಜನರು ಯಾವುದೇ ವಿಷಯವನ್ನು ಆಯ್ಕೆಮಾಡುವಾಗ ಸಾಕಷ್ಟು ಗೊಂದಲಗಳನ್ನು ಎದುರಿಸುತ್ತಾರೆ. ಹೆಚ್ಚು ಬುದ್ಧಿವಂತರಾಗಿದ್ದರೂ, ಅವರಲ್ಲಿ ಸ್ವಲ್ಪ ಕಡಿಮೆ ಆತ್ಮವಿಶ್ವಾಸವಿರುತ್ತದೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್​ಸೈಟ್​ ಜವಾಬ್ದಾರರಾಗಿರುವುದಿಲ್ಲ.

ನಿಮಗೂ ಆಗಾಗ ಕೆಟ್ಟ ಕನಸುಗಳು ಬರುತ್ತವೆಯೇ? ತಪ್ಪಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… Nightmares

ವಿಶ್ವಕಪ್​ಗಾಗಿ 30 ಲಕ್ಷ ಬೀದಿ ನಾಯಿಗಳನ್ನು ಕೊಲ್ಲಲು ಕಾರ್ಯಾಚರಣೆ ಆರಂಭಿಸಿದ ಮೊರೊಕ್ಕೊ ಸರ್ಕಾರ! Dogs

Share This Article

ಏಳನೇ ತಿಂಗಳಲ್ಲಿ ಹೆರಿಗೆಯಾದರೆ ಏನಾಗುತ್ತದೆ?; ಮಗುವಿನ ಆರೋಗ್ಯದ ಮೇಲಾಗುವ ಪರಿಣಾಮವೇನು.. ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಗರ್ಭಾವಸ್ಥೆಯಲ್ಲಿ ಮಗುವನ್ನು 9 ತಿಂಗಳುಗಳ ಕಾಲ ಇಟ್ಟುಕೊಳ್ಳುವುದು ಮುಖ್ಯ ಎಂದು ವೈದ್ಯರು ಸೇರಿದಂತೆ ಎಲ್ಲಾ ತಜ್ಞರು…

ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಬೇಕೇ?; ಅಡುಗೆಮನೆಯಲ್ಲಿನ ಈ 2 ವಸ್ತುಗಳನ್ನು ತಪ್ಪದೆ ಬಳಸಿ | Health Tips

ಇತ್ತೀಚಿನ ದಿನಗಳಲ್ಲಿ ಕಳಪೆ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಯಿಂದಾಗಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಸಮಸ್ಯೆ…

ಚಳಿಗಾಲದಲ್ಲಿ ಹುಣಸೆಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? health benefits of tamarind

health benefits of tamarind : ನಮ್ಮ ದಿನನಿತ್ಯದ ಅಡುಗೆಯಲ್ಲಿ ಹುಣಸೆಹಣ್ಣನ್ನು ಬಳಸುವುದರಿಂದ ನಮಗೆ ಅರಿವಿಲ್ಲದೆಯೇ…