Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಸಂಖ್ಯೆಗಳು ನಮ್ಮ ಜೀವನದ ಎಲ್ಲ ವಿಷಯಗಳೊಂದಿಗೆ ಆಳವಾದ ಸಂಬಂಧವನ್ನು ಹೊಂದಿವೆ. ಅಲ್ಲದೆ, ಈ ಸಂಖ್ಯೆಗಳು ನೈಸರ್ಗಿಕವಾಗಿ ವಿಶ್ವದಲ್ಲಿ ವಿಶಿಷ್ಟ ಶಕ್ತಿಯನ್ನು ಹೊಂದಿದ್ದು, ಯಾರನ್ನಾದರೂ ಮೇಲಕ್ಕೇರಿಸಬಹುದು ಮತ್ತು ಕೆಳಗಿಳಿಸಬಹುದು.
ಸಂಖ್ಯಾಶಾಸ್ತ್ರದ ಆಧಾರದ ಮೇಲೆ, ವ್ಯಕ್ತಿಯ ಜನ್ಮ ದಿನಾಂಕವು ಅವರ ಭವಿಷ್ಯದ ಜೀವನ ಮತ್ತು ಆರ್ಥಿಕ ವಿಷಯಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ. ಹೀಗಾಗಿ, ಕೆಲವು ನಿರ್ದಿಷ್ಟ ದಿನಾಂಕಗಳಲ್ಲಿ ಜನಿಸಿದ ಮಹಿಳೆಯರು ಮದುವೆಯ ನಂತರ ತಮ್ಮ ಗಂಡನ ಮನೆಯನ್ನು ಪ್ರವೇಶಿಸುವಾಗ ಜತೆಯಲ್ಲಿ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತಾರೆ ಎಂದು ಹೇಳಲಾಗುತ್ತದೆ.
ಆ ಮಹಿಳೆಯರು ಜನಿಸಿದ ದಿನಾಂಕಗಳು ಮತ್ತು ಅವರ ವಿಶೇಷ ಗುಣಗಳ ಬಗ್ಗೆ ನಾವೀಗ ತಿಳಿದುಕೊಳ್ಳೋಣ. ಅದಕ್ಕೂ ರಾಡಿಕ್ಸ್ ಸಂಖ್ಯೆ ಬಗ್ಗೆ ತಿಳಿದುಕೊಳ್ಳೋಣ. ಒಬ್ಬ ವ್ಯಕ್ತಿಯ ಜನ್ಮ ದಿನಾಂಕದ ಮೊತ್ತವನ್ನು ರಾಡಿಕ್ಸ್ ಸಂಖ್ಯೆ ಅಥವಾ ಮೂಲಾಂಕ ಎಂದು ಕರೆಯಲಾಗುತ್ತದೆ. ಉದಾಹರಣೆಗೆ ಒಬ್ಬ 24ನೇ ತಾರೀಖಿನಂದು ಜನಿಸಿದರೆ ಆತನ ರಾಡಿಕ್ಸ್ ಸಂಖ್ಯೆ 2+4= 6 ಆಗಿರುತ್ತದೆ. ಸಂಖ್ಯಾಶಾಸ್ತ್ರವನ್ನು ಈ ರಾಡಿಕ್ಸ್ ಸಂಖ್ಯೆಗಳ ಆಧಾರದ ಮೇಲೆ ಹೇಳಲಾಗುತ್ತದೆ. ರಾಶಿಗಳಂತೆ ರಾಡಿಕ್ಸ್ ಸಂಖ್ಯೆಗಳು ಕೂಡ ಗ್ರಹಗಳೊಂದಿಗೆ ಸಂಬಂಧ ಹೊಂದಿವೆ. ಸಂಖ್ಯಾಶಾಸ್ತ್ರದಲ್ಲಿ 01 ರಿಂದ 09ರವರೆಗಿನ ಸಂಖ್ಯೆಗಳನ್ನು ರಾಡಿಕ್ಸ್ ಸಂಖ್ಯೆಗಳು ಎಂದು ಹೇಳಲಾಗುತ್ತದೆ. ಈ ಒಂಬತ್ತು ರಾಡಿಕ್ಸ್ ಸಂಖ್ಯೆಗಳು ಕೂಡ ನವಗ್ರಹಗಳಲ್ಲಿ ಒಂದೊಂದು ಗ್ರಹಗಳಿಗೆ ಸೀಮಿತವಾಗಿವೆ.
ಸಂಖ್ಯೆ 6
ಸಂಖ್ಯಾಶಾಸ್ತ್ರದ ಶಾಸ್ತ್ರದ ಪ್ರಕಾರ, 1 ರಿಂದ 9 ಸಂಖ್ಯೆಗಳಲ್ಲಿ 6ನೇ ಸಂಖ್ಯೆಯು ಲೌಕಿಕ ಸುಖಗಳು ಮತ್ತು ಸಂಪತ್ತಿನ ಅಧಿಪತಿಯಾದ ಶುಕ್ರನೊಂದಿಗೆ ಬಹಳ ನಿಕಟ ಸಂಬಂಧವನ್ನು ಹೊಂದಿದೆ. ಆದ್ದರಿಂದ, ಯಾವುದೇ ತಿಂಗಳ 6, 15 ಮತ್ತು 24ನೇ ತಾರೀಖಿನಂದು ಜನಿಸಿದ ಮಹಿಳೆಯರು ಶುಕ್ರನ ಪ್ರಭಾವಕ್ಕೆ ಒಳಗಾಗುತ್ತಾರೆ. ಹೀಗಾಗಿ ಅವರು ಸ್ವಾಭಾವಿಕವಾಗಿಯೇ ಐಷಾರಾಮಿ ಜೀವನದತ್ತ ಆಕರ್ಷಿತರಾಗುತ್ತಾರೆ.
ಈ ದಿನಾಂಕಗಳಲ್ಲಿ ಜನಿಸಿದ ಮಹಿಳೆಯರು ತಮ್ಮ ಪತಿ ಮತ್ತು ಅತ್ತೆ-ಮಾವಂದಿರಿಗೆ ಅಪಾರ ಸಂಪತ್ತು ಮತ್ತು ಅದೃಷ್ಟವನ್ನು ತರುತ್ತಾರೆ. ಇವರು ತಮ್ಮ ಜೀವನದುದ್ದಕ್ಕೂ ತಮ್ಮ ಗಂಡಂದಿರಿಗೆ ಹಣಕಾಸಿನ ವಿಷಯಗಳಲ್ಲಿ ವಿಶೇಷವಾಗಿ ಬೆಂಬಲ ನೀಡುತ್ತಾರೆ. ಈ ದಿನಾಂಕಗಳಲ್ಲಿ ಜನಿಸಿದ ಮಹಿಳೆಯರಿಗೆ ಎಂದಿಗೂ ಹಣದ ಕೊರತೆ ಇರುವುದಿಲ್ಲ.
ವಿಶೇಷ ಗುಣಗಳು
ಈ ದಿನಾಂಕಗಳಲ್ಲಿ ಜನಿಸಿದ ಮಹಿಳೆಯರು ಭಾವನೆಗಳಿಗೆ ಹೆಚ್ಚಿನ ಬೆಲೆ ನೀಡುತ್ತಾರೆ ಮತ್ತು ತಮ್ಮ ಪ್ರೇಮ ಜೀವನದಲ್ಲಿ ಅತಿಯಾಗಿ ತೊಡಗಿಸಿಕೊಂಡಿರುತ್ತಾರೆ. ಜೀವನದಲ್ಲಿ ಸಣ್ಣ ವಿಷಯಗಳಿಗೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಸುಂದರವಾಗಿ ಕಾಣುವುದರಿಂದ ಇತರರನ್ನು ಸುಲಭವಾಗಿ ಮೋಡಿ ಮಾಡುತ್ತಾರೆ. ತಮ್ಮ ಪ್ರೀತಿಪಾತ್ರರನ್ನು ಹೆಚ್ಚಿನ ಗೌರವದಿಂದ ಕಾಣುತ್ತಾರೆ. ಅವರಿಗೋಸ್ಕರ ಏನು ಬೇಕಾದರೂ ಮಾಡುತ್ತಾರೆ. ಮದುವೆಯ ನಂತರವೂ ಅವರು ತಮ್ಮ ವೃತ್ತಿಜೀವನದಲ್ಲಿ ಯಶಸ್ವಿಯಾಗುತ್ತಲೇ ಇರುತ್ತಾರೆ. ಗಂಡನ ಮನೆಯನ್ನು ಇಬ್ಭಾಗಿಸಲು ಎಂದಿಗೂ ಇಚ್ಛಿಸುವುದಿಲ್ಲ. ತಮ್ಮ ಗಂಡಂದಿರನ್ನು ಜೀವನದುದ್ದಕ್ಕೂ ಆರ್ಥಿಕವಾಗಿ ಬೆಂಬಲಿಸುತ್ತಾರೆ. ಅವರು ಸ್ವಾಭಾವಿಕವಾಗಿ ಅತ್ಯುತ್ತಮ ಹಣಕಾಸು ನಿರ್ವಹಣಾ ಕೌಶಲ್ಯಗಳನ್ನು ಹೊಂದಿರುತ್ತಾರೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್ಸೈಟ್ ಜವಾಬ್ದಾರರಾಗಿರುವುದಿಲ್ಲ.
ಅರ್ಧಶತಕದ ಬಳಿಕ ತೋರಿದ ಸನ್ನೆಯ ಅರ್ಥವೇನು? ಅಭಿಷೇಕ್ ಕೊಟ್ಟ ಅಚ್ಚರಿ ಉತ್ತರ ಹೀಗಿದೆ… Abhishek Sharma
ಅನಂತ್ ಅಂಬಾನಿ ಮದ್ವೆಯಂತೆ ನನ್ನ ಮಗನ ವಿವಾಹ… ಅಚ್ಚರಿಯ ಹೇಳಿಕೆ ನೀಡಿದ ಗೌತಮ್ ಅದಾನಿ! Gautam Adani