More

  ಲೋಕಸಭೆ ಚುನಾವಣೆ: ಪ್ರಿಯಾಂಕಾ ವಾದ್ರಾ ವಿರುದ್ಧ ನೂಪುರ್ ಶರ್ಮಾ ಸ್ಪರ್ಧೆ ಸಾಧ್ಯತೆ!

  ಉತ್ತರಪ್ರದೇಶ: ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕವಾದ ಹೇಳಿಕೆಗಳನ್ನು ನೀಡಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

  ಇದನ್ನೂ ಓದಿ: ಲೋಕಸಭೆ ಚುನಾವಣೆ 2024: ಪಂಜಾಬ್‌ನಲ್ಲಿ ಅಕಾಲಿದಳ ಮತ್ತು ಬಿಜೆಪಿ ಮೈತ್ರಿ ಬಹುತೇಕ ಖಚಿತ? 

  ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎನ್ನಲಾದ ಉತ್ತರ ಪ್ರದೇಶದ ಕಾಂಗ್ರೆಸ್​ ಭದ್ರಕೋಟೆ ರಾಯ್ ಬರೇಲಿಯಿಂದ ಬಿಜೆಪಿಯಿಂದ ನೂಪುರ್ ಶರ್ಮಾ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

  2019 ರ ಲೋಕಸಭೆ ಚುನಾವಣೆ ವೇಳೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಗೆದ್ದಿತ್ತು. ಕಾಂಗ್ರೆಸ್​ನ ಭದ್ರಕೋಟೆ ರಾಯ್​ ಬರೇಲಿಯಿಂದ ಸೋನಿಯಾ ಗಾಂಧಿ ಅವರು ಗೆದ್ದಿದ್ದರು. ಈ ಬಾರಿ ರಾಯ್​ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನೂಪುರ್ ಶರ್ಮಾ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆಯುತ್ತಿದೆ.

  ನೂಪುರ್ ಶರ್ಮಾ ಈ ಹಿಂದೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಆಪ್‌ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ 31 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋತಿದ್ದರು. ಟಿವಿ ಕಾರ್ಯಕ್ರಮವೊಂದರಲ್ಲಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತಾಗಿದ್ದರು. ಈಗ ಅವರ ಅಮಾನತು ರದ್ದು ಮಾಡಿ ಕಣಕ್ಕಿಳಿಸುವ ಊಹಾಪೋಹದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.

  ಕಳೆದ ಮೇ ತಿಂಗಳಲ್ಲಿ ಟಿವಿ ಚಾನೆಲೊಂದರಲ್ಲಿ ಚರ್ಚೆಯೊಂದರಲ್ಲಿ ಭಾಗವಹಿಸಿದ್ದ ನೂಪುರ್ ಶರ್ಮಾ ಅವರು ನೀಡಿದ ಹೇಳಿಕೆ ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗಿತ್ತು. ಇದಾದ ನಂತರ ಅವರು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದರ ಜೊತೆಗೆ ಅವರು 2022ರ ಜೂನ್‌ 5 ರಂದು ಟ್ವಿಟ್ಟರ್‌ನಲ್ಲಿ ಮಾಡಿದ್ದ ಪೋಸ್ಟ್‌ ಕೊನೆಯ ಸಾರ್ವಜನಿಕ ಪೋಸ್ಟ್ ಆಗಿತ್ತು. ಪ್ರವಾದಿ ಮೊಹಮ್ಮದ್ ಬಗ್ಗೆ ಇವರು ನೀಡಿದ ಹೇಳಿಕೆ ದೇಶದಲ್ಲಿ ಭಾರತೀಯ ಮುಸಲ್ಮಾನರು ಸಿಡಿದೇಳುವಂತೆ ಮಾಡಿತ್ತು.

  ಗಾಂಧಿ ಕುಟುಂಬದ ಭದ್ರಕೋಟೆ ಎಂದೇ ಬಿಂಬಿತವಾಗಿರುವ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಿಂದ ಪ್ರಬಲ ಅಭ್ಯರ್ಥಿಗಳಿಲ್ಲದ ಕಾರಣ ಬಿಜೆಪಿ ಅಭ್ಯರ್ಥಿ ನೂಪುರ್ ಶರ್ಮಾ ಟಿಕೆಟ್​ ನೀಡಿದರೆ ಸುಲಭವಾಗಿ ಗೆಲುವು ಸಾಧಿಸುವ ಲೆಕ್ಕಾಚಾರ ಹಾಕಿಕೊಂಡಿದೆ. ಈ ಹಿಂದೆ ಪ್ರಿಯಾಂಕಾ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳು ಬಂದಿದ್ದವು. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

  ನೂಪುರ್ ಶರ್ಮಾ ಯಾರು?: ನೂಪುರ್ ಶರ್ಮಾ ಅವರು ತಮ್ಮ ವಿದ್ಯಾರ್ಥಿ ದಿನಗಳಿಂದಲೂ ಬಿಜೆಪಿಯ ವಿದ್ಯಾರ್ಥಿ ಘಟಕ ಎಬಿವಿಪಿಯೊಂದಿಗೆ ಸಂಬಂಧ ಹೊಂದಿದ್ದರು. ನೂಪುರ್ ಅವರು 2008 ರಲ್ಲಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ವೃತ್ತಿಪರವಾಗಿ ವಕೀಲರಾಗಿರುವ ಶರ್ಮಾ ಅವರು 2015 ರ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸಿದ್ದರು. ಇದರ ನಂತರ, ಹಲವಾರು ನಗರಗಳಲ್ಲಿ ಹಿಂಸಾಚಾರ ಭುಗಿಲೆದ್ದಿತು. ವಿವಾದದ ನಡುವೆ ಬಿಜೆಪಿ ಅವರನ್ನು ಅಮಾನತುಗೊಳಿಸಿದೆ.

  ಬಾಯ್‌ಫ್ರೆಂಡ್‌ಗಿಂತ ಶ್ರೀಮಂತೆ ಸ್ಮೃತಿ ಮಂದಾನ: ಇವ್ರಿಗೆ ‘ಬಾಯ್ ಫ್ರೆಂಡ್’ ಇದಾನಾ ಎಂದ್ರು ಆರ್‌ಸಿಬಿ ಫ್ಯಾನ್ಸ್!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts