More

    ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಮುಷ್ಕರ

    ಚಿತ್ರದುರ್ಗ: ಸುಸಜ್ಜಿತ ಕಟ್ಟಡ ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಸರ್ಕಾರಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

    2021ರಲ್ಲಿ ಪ್ರಾರಂಭವಾದ ಕಾಲೇಜಿನಲ್ಲಿ ಬೋಧಕರು, ಕಟ್ಟಡ, ಪೀಠೋಪರಣಗಳು ಸೇರಿ ಹಲವು ಮೂಲ ಸೌಕರ್ಯಗಳ ಕೊರತೆ ಇದೆ. ಸಮಸ್ಯೆಗಳನ್ನು ನಿವಾರಿಸುವಂತೆ ಆಗ್ರಹಿಸಿ ಹಲವು ಬಾರಿ ಪ್ರತಿಭಟಿಸಿದರೂ ಸಂಬಂಧಿಸಿದವರು ಗಮನ ಹರಿಸಿಲ್ಲ ಎಂದು ದೂರಿದರು.

    ಮೂರು ಬ್ಯಾಚ್‌ನ 180 ವಿದ್ಯಾರ್ಥಿಗಳಿಗೆ ಎರಡು ಕೊಠಡಿಗಳಿವೆ. ಶೀಘ್ರದಲ್ಲಿ 60 ವಿದ್ಯಾರ್ಥಿಗಳ ಇನ್ನೊಂದು ತಂಡವೂ ಸೇರ್ಪಡೆ ಆಗಲಿದೆ. ಕೊಠಡಿಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ನಿತ್ಯ ಹೆಚ್ಚಿನ ಅವಧಿ ಆಸ್ಪತ್ರೆಯಲ್ಲಿ ಕೆಲಸ ಮಾಡುವಂತಾಗಿದೆ ಎಂದು ಅಳಲು ತೋಡಿಕೊಂಡರು.

    ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಗೃಹವಿಲ್ಲ. ಮೊದಲ ವರ್ಷದ ಪಠ್ಯಪುಸ್ತಕಗಳನ್ನು ಸರಿಯಾಗಿ ವಿತರಿಸಿಲ್ಲ. ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ಬದಲು ಇಂಡಿಯನ್ ನರ್ಸಿಂಗ್ ಕೌನ್ಸಿಲ್ (ಐಎನ್‌ಸಿ) ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

    ವಿದ್ಯಾರ್ಥಿಗಳ ಅಹವಾಲು ಆಲಿಸಿದ ಡಿಎಸ್ ಡಾ.ರವೀಂದ್ರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts